Monday, November 29, 2021

ಜನರ ಅಭಿಪ್ರಾಯ ಪಡೆದು ಲಾಕ್ ಡೌನ್ ನಿರ್ಧರಿಸಿ- ಸುಪ್ರೀಂ ಸೂಚನೆ

Follow Us

ನವದೆಹಲಿ: ಲಾಕ್ ಡೌನ್ ಮುಂದುವರಿಸುವ ಬಗ್ಗೆ ಜನರ ಅಭಿಪ್ರಾಯ ಪಡೆದು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಕೋವಿಡ್ 19 ಗೆ ಸಂಬಂಧಿಸಿದ ಚಿಕಿತ್ಸೆಗೆ ಯಾವುದೇ ಶುಲ್ಕ ಪಡೆಯಬಾರದು ಎಂದೂ ಸುಪ್ರೀಂ ಕೋರ್ಟ್ ಹೇಳಿದೆ. ಕೊರೋನಾ ವೈರಸ್ ಪರೀಕ್ಷೆಗೆ ಖಾಸಗಿ ಲ್ಯಾಬ್ ಗಳು 4500 ರೂಪಾಯಿ ತೆಗೆದುಕೊಳ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪರೀಕ್ಷೆಗೆ ಲ್ಯಾಬ್ ಗಳು 4500 ರೂಪಾಯಿ ತೆಗೆದುಕೊಳ್ತಿರುವ ಬಗ್ಗೆ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತನಿಖೆಗೆ ಹಣ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಖಾಸಗಿ ಲ್ಯಾಬ್‌ಗಳಿಗೆ ಕೊರೋನಾ ಪರೀಕ್ಷೆಗೆ ಹಣ ತೆಗೆದುಕೊಳ್ಳಲು ಅವಕಾಶ ನೀಡಬಾರದು ಎಂದು ನ್ಯಾಯಾಲಯ ಹೇಳಿದೆ. ಈಗ 4500 ರೂ. ಶುಲ್ಕ ಪಡೆಯಲಾಗುತ್ತಿದ್ದು, ಇದನ್ನೂ ಪಡೆಯಬಾರದು. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರವೇ ಹಣವನ್ನು ಪಾವತಿಸಬೇಕು. ಕೋವಿಡ್ ನಿಯಂತ್ರಣಕ್ಕೆ ಹೋರಾಡುತ್ತಿರುವ ವೈದ್ಯರು, ನರ್ಸ್ ಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಸುಪ್ರೀಂ ಸೂಚಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!