Saturday, November 26, 2022

ಗಾಜಿಯಾಬಾದ್ ಹಲ್ಲೆ ಪ್ರಕರಣ: ನಟಿ‌ ಸ್ವರಾ, ಟ್ವಿಟರ್ ಎಂಡಿ‌ ವಿರುದ್ಧ ದೂರು

Follow Us

newsics.com

ನವದೆಹಲಿ: ಗಾಜಿಯಾಬಾದ್‌ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸ್ವರಾ ಭಾಸ್ಕರ್, ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಮತ್ತಿತರರ ವಿರುದ್ಧ ದೂರು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಗಾಜಿಯಾಬಾದ್ ನಲ್ಲಿ ನಡೆದ ಹಲ್ಲೆಯ ವಿಡಿಯೊ ತುಣುಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಗೆ ದೂರು ಬಂದಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ನಟಿ ಸ್ವರಾ ಭಾಸ್ಕರ್, ಟ್ವಿಟರ್‌ ಇಂಡಿಯಾ ಕಂಪನಿ ಎಂಡಿ ಮನೀಶ್ ಮಹೇಶ್ವರಿ ಮತ್ತಿತರರ ವಿರುದ್ಧ ತಿಲಕ್ ಮಾರ್ಗ್ ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿದೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೊದ ತುಣಕಿನಲ್ಲಿ ಹಿರಿಯ ಮುಸ್ಲಿಂ ವ್ಯಕ್ತಿಯೊಬ್ಬರು, ನಾಲ್ವರು ನನ್ನನ್ನು ಥಳಿಸಿ, ಗಡ್ಡವನ್ನು ಕತ್ತರಿಸಿದ್ದಾರೆ ಮತ್ತು ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸಿದ್ದಾರೆ ಎಂದು ಹೇಳುವ ದೃಶ್ಯವಿತ್ತು. ಗಾಜಿಯಾಬಾದ್‌ನ ಲೋನಿ ಪ್ರದೇಶದಲ್ಲಿ ಜೂನ್‌ 5 ರಂದು ನಡೆದ ಈ ಘಟನೆ ಎರಡು ದಿನಗಳ ನಂತರ ಪೊಲೀಸರ ಗಮನಕ್ಕೆ ಬಂದಿದ್ದು, ಬಳಿಕ ಎಫ್‌ಐಆರ್ ದಾಖಲಿಸಿದ್ದರು.

ಮೈಕ್ರೋಸಾಫ್ಟ್ ಹೊಸ ಅಧ್ಯಕ್ಷರಾಗಿ ಸತ್ಯ ನಾಡೆಲ್ಲಾ ನೇಮಕ

ಖಾದ್ಯ ತೈಲ‌ ಬೆಲೆ ಶೇ.20ರಷ್ಟು ಇಳಿಕೆ

ನೇಪಾಳದಲ್ಲಿ ಭಾರೀ ಮಳೆ, 7 ಮಂದಿ ಪ್ರವಾಹಪಾಲು, ಮೂವರು ಭಾರತೀಯರೂ ಸೇರಿ‌ ಹಲವರು ನಾಪತ್ತೆ

ಜುಲೈ 31ರೊಳಗೆ ಸಿಬಿಎಸ್ಇ 12ನೇ ತರಗತಿ ಫಲಿತಾಂಶ

ಈ ‘ಸೂರ್ಯನ ಮೊಟ್ಟೆ’ಗೆ 2.70 ಲಕ್ಷ ರೂಪಾಯಿ!

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!