Tuesday, December 5, 2023

ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!

Follow Us

newsics.com

ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ.

ಇಲ್ಲಿನ ಚೌಬೇಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ವ್ಯಕ್ತಿಯೊಬ್ಬರು ಕೆಲ ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ, ಅದೇ ಗ್ರಾಮದ ಮತ್ತೊಬ್ಬ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ. ಹೀಗಿದ್ದಾಗ ಸೋಮವಾರ ಮಧ್ಯರಾತ್ರಿ ಗೆಳತಿಯು ತನ್ನ ಪ್ರಿಯಕರನಿಗೆ ಕರೆ ಮಾಡಿ ಮನೆಗೆ ಆಹ್ವಾನಿಸಿದ್ದಾಳೆ. ಅಲ್ಲದೇ, ತನ್ನ ಇನ್ನೊಬ್ಬ ಸ್ನೇಹಿತೆಯ ಜೊತೆಗೂ ದೈಹಿಕ ಸಂಪರ್ಕ ಹೊಂದಲು ಸ್ವತಃ ಗೆಳತಿಯೇ ಆಫರ್ ನೀಡಿದ್ದಾಳೆ.

ಇದು ಯುವಕನಿಗೆ ವಿಚಿತ್ರವೆನ್ನಿಸಿ, ತಾನು ಹಾಗೆ ಮಾಡಲು ನಿರಾಕರಿಸಿದ್ದಾನೆ. ಮಾತು ಕೇಳದ ಗೆಳತಿ ಪ್ರಿಯಕರನ ಮೇಲೆ ತೀವ್ರ ಒತ್ತಡ ಹೇರಿದ್ದಾಳೆ. ಇಷ್ಟಾದರೂ ಬಗ್ಗದ ಆತ ಇನ್ನೊಬ್ಬ ಮಹಿಳೆ ಜೊತೆ ದೈಹಿಕವಾಗಿ ಬೆರೆಯಲ್ಲ ಎಂದಿದ್ದಾನೆ. ಇದು ಗೆಳತಿಯ ಪಿತ್ತ ನೆತ್ತಿಗೇರಿಸಿದೆ. ಕೋಪದಲ್ಲಿ ಗೆಳತಿ ಆಕೆಯ ಗೆಳೆಯನ ಗುಪ್ತಾಂಗವನ್ನು ಬಾಯಿಯಿಂದ ಕಚ್ಚಿದ್ದಾಳೆ.

ಗೆಳೆಯ ನೋವಿನಿಂದ ಜೋರಾಗಿ ಕೂಗಿಕೊಂಡಿದ್ದಾನೆ. ಕಚ್ಚಿದ್ದರಿಂದ ರಕ್ತ ಕೂಡ ಚಿಮ್ಮಿದೆ. ತೀವ್ರ ಘಾಸಿಗೊಂಡ ಯುವಕನ ಆರ್ತನಾದದಿಂದ ಅಕ್ಕಪಕ್ಕದವರು ಆ ಮನೆಗೆ ಬಂದಿದ್ದಾರೆ. ಘಟನೆಯಿಂದ ತೀವ್ರ ಮುಜುಗರಕ್ಕೀಡಾಗ ಯುವಕ ಅಲ್ಲಿಂದ ಓಡಿ ಹೋಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಯುವಕ ಈ ವಿಷಯವನ್ನು ಪತ್ನಿಗೆ ತಿಳಿಸಿದ್ದಾನೆ. ಈ ವಿಷಯ ಹೊರಗೆ ಗೊತ್ತಾದರೆ, ಮರ್ಯಾದೆ ಹಾಳಾಗುತ್ತದೆ. ಪೊಲೀಸರಿಗೂ ಹೇಳಬೇಡ ಎಂದು ಪತ್ನಿಯಲ್ಲಿ ಕೋರಿಕೊಂಡಿದ್ದಾನೆ.

ಗಂಡನ ಸ್ಥಿತಿ ಕಂಡು ಹೆದರಿದ ಪತ್ನಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಪೊಲೀಸರು ಸ್ಥಳಕ್ಕಾಗಮಿಸಿ ನೋವಿನಿಂದ ಒದ್ದಾಡುತ್ತಿದ್ದ ಯುವಕನನ್ನು ಚೌಬೇಪುರ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗುಪ್ತಾಂಗಕ್ಕೆ ತೀವ್ರ ಗಾಯವಾಗಿದ್ದರಿಂದ ಆತನ ಸ್ಥಿತಿ ಗಂಭೀರವಾಗಿದೆ ಎಂದು ಕಾಮ್ಪುರದ ಜಿಲ್ಲಾ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!