ಪಣಜಿ: ರಾಜ್ಯ ಸರ್ಕಾರ ಮಹದಾಯಿ ವಿಷಯದಲ್ಲಿ ಕರ್ನಾಟಕದೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಮಹದಾಯಿ ನದಿ ನೀರು ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ಅಗತ್ಯವೆನಿಸಿದರೆ ನಾವು ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯ ವಿರುದ್ಧವೂ ನ್ಯಾಯಾಲಯದ ಮೆಟ್ಟಿಲೇರುತ್ತೇವೆ ಎಂದು ಸಾವಂತ್ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಕ್ಯಾಬಿನೆಟ್ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋವಾ ಸಿಎಂ, ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಗೋವಾ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯಲಿದೆ ಎಂದರು.
ಮಹದಾಯಿ; ಯಾವುದೇ ರಾಜಿ ಇಲ್ಲ- ಗೋವಾ ಸಿಎಂ
Follow Us