ಪಣಜಿ: ಗೋವಾ ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಸದಾನಂದ ಟನಾವಾಡೆ ಆಯ್ಕೆಯಾಗಿದ್ದಾರೆ. ಈ ಕುರಿತು ಶುಭ ಹಾರೈಸಿರುವ ಬಿಜೆಪಿ ಹಿರಿಯ ನಾಯಕ ಬಿ ಎಲ್ ಸಂತೋಷ್, ಗೋವಾದಲ್ಲಿ ಸದಾನಂದ ಅವರ ನೇತೃತ್ವದಲ್ಲಿ ಪಕ್ಷ ಇನ್ನಷ್ಟು ಬಲಗೊಳ್ಳಲಿ ಎಂದು ಆಶಿಸಿದ್ದಾರೆ. ಸಂಘಟನಾತ್ಮಕ ಚುನಾವಣೆ ಬಿಜೆಪಿಯಲ್ಲಿ ಮುಂದುವರಿದಿದ್ದು, ಮುಂದಿನ ಎರಡು ತಿಂಗಳಲ್ಲಿ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಕೂಡ ನಡೆಯಲಿದೆ