newsics.com
ಲಖನೌ: ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಅವರ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಇಲ್ಲಿನ ಮೇದಂತಾ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.
ಹಿರಿಯ ವೈದ್ಯ ಕೇಶವ್ ಪ್ರಸಾದ್ ಮೌರ್ಯ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದು, ಮಹಾಂತ ನೃತ್ಯ ಗೋಪಾಲ್ ದಾಸ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.
ಮಂಗಳವಾರ (ನ.10) ಮಹಾಂತ ನೃತ್ಯ ಗೋಪಾಲ್ ದಾಸ್ ಡಯಾಲಿಸಿಸ್ ಮಾಡಲಾಯಿತು. ಅವರ ಸ್ಥಿತಿ ಗಂಭೀರವಾಗಿದ್ದರೂ, ಚಿಂತಾಜನಕ ಸ್ಥಿತಿಯಲ್ಲಿಲ್ಲ ಎಂದು ಆಸ್ಪತ್ರೆಯ ನಿರ್ದೇಶಕ ರಾಕೇಶ್ ಕಪೂರ್ ತಿಳಿಸಿದ್ದಾರೆ,
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಸೋಮವಾರ ಸರ್ಕಾರಿ ಸ್ವಾಮ್ಯದ ಶ್ರೀರಾಮ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅವರ ಸ್ಥಿತಿ ಗಂಭೀರವಾದ ಕಾರಣ ಅವರನ್ನು ವೈದ್ಯರು ಲಕ್ನೋದ ಮೇದಂತಾ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದರು.
ಕಳೆದ ಆಗಸ್ಟ್ʼನಲ್ಲಿ ಮಹಾಂತ ನೃತ್ಯ ಗೋಪಾಲ್ ದಾಸ್ ಅವರು ಮಥುರಾದಲ್ಲಿದ್ದಾಗ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಕೂಡಲೇ ಅವರನ್ನ ಗುರುಗ್ರಾಮದ ಮೇದಂತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆನೀಡಲಾಯಿತು.