Tuesday, April 13, 2021

ವಿಮಾನ ಪ್ರಯಾಣದರ ಹೆಚ್ಚಳಕ್ಕೆ ಅಂಕುಶ

ನವದೆಹಲಿ: ಕೊರೋನಾದ ಕಾರಣ ನೀಡಿ ಪ್ರಯಾಣಿಕರಿಂದ  ಸುಲಿಗೆ ಮಾಡಲು ಹೊರಟ್ಟಿದ್ದ ಖಾಸಗಿ  ವಿಮಾನ ಯಾನ ಸಂಸ್ಥೆಗಳಿಗೆ ಸರ್ಕಾರ ಅಂಕುಶ ಹಾಕಿದೆ.  ವಿಮಾನ.ಯಾನ ಸಚಿವಾಲಯ ಈ ಸಂಬಂಧ ಆದೇಶ  ನೀಡಿದೆ. ನಿಗದಿಪಡಿಸಿರುವ ಕನಿಷ್ಠ ಮತ್ತು ಗರಿಷ್ಠ ದರ ಮಾತ್ರ ವಸೂಲಿ ಮಾಡಬೇಕು.  ಇದನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಮೇ 25ರಂದು ಮೂರನೇ ಒಂದರಷ್ಟು ವಿಮಾನ ಸೇವೆ ಆರಂಭಿಸಲಿದೆ. ಆ ಬಳಿಕ ಹಂತ ಹಂತವಾಗಿ ಇದನ್ನು ಹೆಚ್ಚಿಸಲಾಗುವುದು ಎಂದು ವಿಮಾನಯಾನ ಸಚಿವಾಲಯ ಹೇಳಿದೆ.ವಿಮಾನದಲ್ಲಿ ಊಟ ಪೂರೈಕೆಯನ್ನು  ನಿಷೇಧಿಸಲಾಗಿದೆ. ವಿಮಾನದ ಎಲ್ಲ ಸಿಬ್ಬಂದಿ ರಕ್ಷಣಾತ್ಮಕ ಕ್ರಮಗಳನ್ನು ಪಾಲಿಸುವಂತೆಯೂ ಸೂಚಿಸಲಾಗಿದೆ. ಇಧೇ ವೇಳೆ ಕಾರ್ಯಾರಂಭಕ್ಕೆ ಕ್ಷಣ ಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ  ಸಿದ್ದತೆ ಭರದಿಂದ ನಡೆಯುತ್ತಿದೆ. ಪ್ರಯಾಣಿಕರ  ತಪಾಸಣೆ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳು  ವಿಮಾನ  ನಿಲ್ದಾಣದ ಸಿಬ್ಬಂದಿಗೆ ತರಬೇತಿ ನೀಡುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!