Wednesday, July 6, 2022

ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ 1 ವಾರ ಸ್ವಯಂಪ್ರೇರಿತ ಐಸೋಲೇಶನ್

Follow Us

ಚೆನ್ನೈ: ವೈದ್ಯರ ಸಲಹೆಯಂತೆ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಒಂದು ವಾರ ಸ್ವಯಂಪ್ರೇರಿತವಾಗಿ ಐಸೋಲೇಶನ್’ಗೆ ಒಳಗಾಗಿದ್ದಾರೆ.
ತಮಿಳುನಾಡು ರಾಜಭವನದಲ್ಲಿ ಮತ್ತೆ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬನ್ವಾರಿಲಾಲ್ ಐಸೋಲೇಶನ್ ಗೆ ಒಳಗಾಗಿದ್ದಾರೆಂದು ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ರಾಜಭವನದ 38 ಮಂದಿ ಕಳೆದ ವಾರ ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಇವರಲ್ಲಿ ಮೂವರಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿತ್ತು. ಈ ಮೂವರನ್ನು ಆರೋಗ್ಯ ಇಲಾಖೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.
ರಾಜಭವನದ ವೈದ್ಯಕೀಯ ಅಧಿಕಾರಿ ರಾಜ್ಯಪಾಲರಿಗೆ ಎಂದಿನಂತೆ ಆರೋಗ್ಯ ತಪಾಸಣೆ ನಡೆಸಿದ್ದಾರೆ ಹಾಗೂ ಅವರು ಆರೋಗ್ಯಯತವಾಗಿ ಹಾಗೂ ಸುದೃಢವಾಗಿ ಇದ್ದಾರೆ ಎಂದು ಹೇಳಿದ್ದಾರೆ. ಆದರೂ, 7 ದಿನಗಳ ಕಾಲ ಪ್ರತ್ಯೇಕವಾಗಿ ಇರುವಂತೆ ವೈದ್ಯರು ಪುರೋಹಿತ್ ಅವರಿಗೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಪ್ರತ್ಯೆಕವಾಗಿ (ಐಸೋಲೇಶನ್) ಇದ್ದಾರೆ ಎಂದು ರಾಜಭವನ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿಗಳ ಕಾರು ಅಪಘಾತ

newsics.com ಧಾರವಾಡ; ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿಗಳ ಕಾರು ಅಪಘಾತವಾಗಿದೆ. ನಿಡಸೋಶಿಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಸ್ವಾಮೀಜಿಗಳು ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ...

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಶಿಖರ್ ಧವನ್ ನಾಯಕ

newsics.com ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಶಿಖರ್...

ಸೂಫಿ ಬಾಬಾ ಖ್ಯಾತಿಯ ಆಧ್ಯಾತ್ಮಿಕ ನಾಯಕ ಖ್ವಾಜಾ ಸಯ್ಯದ್ ಚಿಶ್ತಿ ಗುಂಡಿಕ್ಕಿ ಹತ್ಯೆ

newsics.com ನಾಸಿಕ್: ಮಹಾರಾಷ್ಟ್ರದ ನಾಸಿಕ್ನಲ್ಲಿ 'ಸೂಫಿ ಬಾಬಾ' ಎಂದೇ ಖ್ಯಾತರಾಗಿದ್ದ ಆಧ್ಯಾತ್ಮಿಕ ನಾಯಕ ಖ್ವಾಜಾ ಸಯ್ಯದ್ ಚಿಶ್ತಿ (35) ಅವರನ್ನು ಮಂಗಳವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ತಲೆಗೆ ಗುಂಡು ತಗುಲಿದ ತಕ್ಷಣವೇ ಮೃತಪಟ್ಟಿದ್ದಾರೆ. ಕೊಲೆಗಾರರು ಕೂಡಲೇ...
- Advertisement -
error: Content is protected !!