Sunday, May 29, 2022

RCB ವಿರುದ್ಧ ಪಂಜಾಬ್ ತಂಡಕ್ಕೆ ಭರ್ಜರಿ ಜಯ

Follow Us

newsics.com
ದುಬೈ: ಐಪಿಎಲ್​ ಟೂರ್ನಿಯ 6ನೇ ಪಂದ್ಯದಲ್ಲಿ ಬ್ಯಾಟಿಂಗ್​ ಹಾಗೂ ಬೌಲಿಂಗ್​ನಲ್ಲಿ ಮಿಂಚು ಹರಿಸಿದ ಪಂಜಾಬ್​ ತಂಡ ರಾಯಲ್​​​ ಚಾಲೆಂಜರ್ಸ್​ ಬೆಂಗಳೂರು ಎದುರು 97 ರನ್​ಗಳ ಭರ್ಜರಿ ಜಯ ಸಾಧಿಸಿತು.
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ದಾಖಲಿಸಿದ್ದ ಬೃಹತ್ ಮೊತ್ತವನ್ನು ಬೆನ್ನಟ್ಟುವಲ್ಲಿ ಎಡವಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 97 ರನ್ ಗಳಿಂದ ಹೀನಾಯವಾಗಿ ಸೋತಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಪಂಜಾಬ್ ತಂಡ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತ್ತು. ಕೆ.ಎಲ್ ರಾಹುಲ್ 69 ಎಸೆತಗಳಲ್ಲಿ 132 ರನ್ ಗಳಿಸಿ ಮಿಂಚಿದ್ದರು. 207 ರನ್ ಗಳ ಗುರಿ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 17 ಓವರ್ ಗಳಲ್ಲಿ ಕೇವಲ 109 ರನ್ ಗಳಿಸಿ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.
ಬೆಂಗಳೂರು ಪರ ವಾಶಿಂಗ್ಟನ್ ಸುಂದರ್ 30, ವಿಲಿಯರ್ಸ್ 28, ಆರನ್ ಫಿಂಚ್ 20 ರನ್ ಗಳಿಸಿದರು. ಪಂಜಾಬ್ ಪರ ರವಿ ಬಿಶ್ನೋಯ್ 3, ಮುರುಗನ್ ಅಶ್ವಿನ್ 3, ಶೆಲ್ಡನ್ ಕೋಟ್ರೆಲ್ ಎರಡು ವಿಕೆಟ್ ಪಡೆದರು.

ಮತ್ತಷ್ಟು ಸುದ್ದಿಗಳು

Latest News

ರಸ್ತೆ ಅಪಘಾತ: ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕದ 7 ಮಂದಿ ಸಾವು, 10 ಜನಕ್ಕೆ ಗಂಭೀರ ಗಾಯ

newsics.com ಉತ್ತರಪ್ರದೇಶ: ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿದ್ದ ಭಕ್ತರಿದ್ದ ಟೆಂಪೋ ಟ್ರಾವೆಲರ್​ ಹಾಗೂ ಟ್ರಕ್‌ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ...

ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್‌ಗೆ ಗುಡ್ ಬೈ

newsics.com ಬೆಂಗಳೂರು: ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರಿಗೆ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಜನಸೇವೆ ಮಾಡುವ ಉದ್ದೇಶದಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೆ....

ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತು

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ 11 ಗಂಟೆಗೆ ಮಾತನಾಡಲಿದ್ದಾರೆ. 88 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹಿಂದಿನ ಪ್ರಧಾನಿಗಳು ದೇಶಕ್ಕಾಗಿ ಮಾಡಿದ ಸೇವೆಯನ್ನು...
- Advertisement -
error: Content is protected !!