newsics.com
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಸಿರು ನ್ಯಾಯಮಂಡಳಿಗೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಮೂರು ಮಂದಿ ನ್ಯಾಯಮೂರ್ತಿಗಳನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠ ಈ ತೀರ್ಪು ನೀಡಿದೆ.
ದೇಶದ ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ಸುಪ್ರೀಂ ಕೋರ್ಟಿನ ಈ ತೀರ್ಪು ಅತ್ಯಂತ ಮಹತ್ವದ್ದಾಗಿದೆ. ಈ ಮಧ್ಯೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ 1960ರ ಅರಣ್ಯ ಕಾಯ್ದೆ ತಿದ್ದುಪಡಿ ಸಂಬಂಧ ನಾಗರಿಕರಿಂದ ಅಭಿಪ್ರಾಯ ಸಂಗ್ರಹಕ್ಕೆ ಕೂಡ ಮುಂದಾಗಿದೆ.
ಕೆಲವೇ ಕೆಲವು ದಿನ ಪತ್ರಿಕೆಗಳಲ್ಲಿ ಈ ಸಂಬಂಧ ಪರಿಸರ ಇಲಾಖೆ ಜಾಹೀರಾತು ಪ್ರಕಟಿಸಿದೆ ಎಂಬ ಆರೋಪ ಕೂಡ ಕೇಳಿ ಬಂದಿದೆ.