Monday, October 3, 2022

ಪುಲ್ವಾಮಾದಲ್ಲಿ ಪೊಲೀಸ್ ಠಾಣೆಯ ಮೇಲೆ ಗ್ರೆನೇಡ್ ದಾಳಿ

Follow Us

Newsics.com

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಪೊಲೀಸ್ ಠಾಣೆಯ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಇದೇ ವೇಳೆ ಖನ್ಯಾರ್ ಎಂಬಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಬಂಕರ್ ಮೇಲೂ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ಅಡಗುತಾಣಗಳನ್ನು ಪತ್ತೆ ಹಚ್ಚಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದು, ಇದು ಉಗ್ರ ಸಂಘಟನೆಗಳಿಗೆ ನಡುಕ ಸೃಷ್ಟಿಸಿದೆ. ದೀಪಾವಳಿ ವೇಳೆ ಭಯೋತ್ಪಾದಕರು  ಭಾರಿ ದಾಳಿ ನಡೆಸುವ ಸಾಧ್ಯತೆ ಯಿದೆ ಎಂಬ ವರದಿ ಹಿನ್ನೆಲೆಯಲ್ಲಿ ಶ್ರೀನಗರ ಸೇರಿದಂತೆ ಜಮ್ಮು ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.

ನಾಲ್ಕು ಬಾರಿ ಶಾಸಕರಾದರೂ ಇನ್ನೂ ಸುಭದ್ರ ಮನೆ ಇರದ ಎಂ ಎಲ್ ಎ

 

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!