newsics.com
ಅಹ್ಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದ್ದು, ಮತದಾನ ಆರಂಭವಾಗಿದೆ.
ರಾಜ್ಯದ 19 ಜಿಲ್ಲೆಗಳಲ್ಲಿ ವ್ಯಾಪಿಸಿರುವ 89 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಎರಡನೆ ಹಂತದ ಮತದಾನ ಡಿಸೆಂಬರ್ 5ರಂದು ನಡೆಯಲಿದ್ದು, ಫಲಿತಾಂಶ ಡಿಸೆಂಬರ್ 8ರಂದು ಪ್ರಕಟವಾಗಲಿದೆ.
ಆಡಳಿತಾ ರೂಢ ಬಿಜೆಪಿಗೆ ಇದು ಅತ್ಯಂತ ಮಹತ್ವದ ಚುನಾವಣೆಯಾಗಿದೆ. ಗುಜರಾತ್ ಫಲಿತಾಂಶ ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಕಾರಣದ ದಿಕ್ಸೂಚಿಯಾಗಿರಲಿದೆ. ಗುಜರಾತ್ ಬಳಿಕ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯಲಿದೆ.
2024ರ ಲೋಕಸಭೆ ಚುನಾವಣೆಯ ಸೆಮಿ ಫೈನಲ್ ಎಂದೇ ಗುಜರಾತ್ ಚುನಾವಣೆಯನ್ನು ವಿಶ್ಲೇಷಿಸಲಾಗುತ್ತಿದೆ