newsics.com
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ ನಡೆದ ಭದ್ರತಾ ಪಡೆಗಳ ಎನ್ಕೌಂಟರ್ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ)ನ ಟಾಪ್ ಭಯೋತ್ಪಾದಕ ಕಮಾಂಡರ್ ಶಾಮ್ ಸೋಫಿ ಹತ್ಯೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ತ್ರಾಲ್ ಪ್ರದೇಶದಲ್ಲಿ ತಿಲ್ವಾನಿ ಮೊಹಲ್ಲಾ ವಗ್ಗದ್ನಲ್ಲಿ ಭಯೋತ್ಪಾದಕರು ಇರುವ ಬಗೆಗಿನ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.
ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟಾಪ್ ಜೆಇಎಂ ಕಮಾಂಡರ್ ಭಯೋತ್ಪಾದಕ ಶಾಮ್ ಸೋಫಿ ಟ್ರಾಲ್ ಎನ್ಕೌಂಟರ್ನಲ್ಲಿ ಹತ್ಯೆಗೀಡಾಗಿದ್ದಾನೆ ಎಂದು ಐಜಿಪಿ ಕಾಶ್ಮೀರ ವಲಯ ಪೊಲೀಸರ ಟ್ವಿಟರ್ ಹ್ಯಾಂಡಲ್ ಹೇಳಿದೆ.
ವೈರಲ್ ಆಯ್ತು ಡಿಕೆಶಿ ಅವಹೇಳನದ ವಿಡಿಯೋ: ‘ಕೈ’ ನಾಯಕರ ವಿರುದ್ಧ ಬಿಜೆಪಿ ವಾಗ್ದಾಳಿ