Wednesday, October 5, 2022

ಗುಂಡಿನ ಚಕಮಕಿ; ಸೇನಾಧಿಕಾರಿ ಸೇರಿ 4 ಯೋಧರು ಹುತಾತ್ಮ, 3 ಉಗ್ರರ ಹತ್ಯೆ

Follow Us

newsics.com
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್ ವಲಯದ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಒಳನುಸುಳುಕೋರರನ್ನು ತಡೆಗಟ್ಟುವ ಪ್ರಯತ್ನದಲ್ಲಿ ಸೇನಾಧಿಕಾರಿ ಸೇರಿದಂತೆ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಈ ಚಕಮಕಿಯಲ್ಲಿ ಒಬ್ಬ ಕ್ಯಾಪ್ಟನ್ ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.

ಭಾನುವಾರ ಬೆಳಗ್ಗೆ ಮಚಿಲ್‌ ಸೆಕ್ಟರ್‌ನಲ್ಲಿ ಎಲ್‌ಒಸಿ ಮೂಲಕ ಒಳನುಸುಳಲು ಪ್ರಯತ್ನಿಸುತ್ತಿದ್ದ 3 ಉಗ್ರರನ್ನು ಸೇನೆ ಕೊಂದಿದೆ. ಎಲ್‌ಒಸಿ ವಲಯದಲ್ಲಿ ಉಗ್ರರು ಒಳ ನುಸುಳುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಬಗ್ಗೆ ಖಚಿತ ಸುಳಿವೀಣೆ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಒಬ್ಬ ಉಗ್ರನನ್ನು ಕೊಲ್ಲಲಾಗಿದೆ. ಸೇನೆಯ ಇಬ್ಬರು ಯೋಧರು ಮತ್ತು ಬಿಎಸ್‌ಎಫ್ನ ಯೋಧ ಹುತಾತ್ಮರಾಗಿದ್ದಾರೆ.
ಕಥುವಾ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಶನಿವಾರ ರಾತ್ರಿ 9 ಗಂಟೆಯಿಂದ ಭಾನುವಾರ ಬೆಳಗ್ಗೆ 5 ಗಂಟೆಯ ವರೆಗೆ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿವೆ. ಅದಕ್ಕೆ ಬಿಎಸ್‌ಎಫ್ ಸಿಬ್ಬಂದಿ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.

ಉತ್ತರಪ್ರದೇಶದಲ್ಲಿ 15 ವರ್ಷದ ಬಾಲಕಿಗೆ ಬೆಂಕಿ ಹಚ್ಚಿ ಹತ್ಯೆ

ಬೆಂಗಳೂರು ವಿವಿ ನಿವೃತ್ತ ಪ್ರೊಫೆಸರ್ ಆತ್ಮಹತ್ಯೆ

ಕರ್ನಾಟಕ ಮೂಲದ ಡಾ.ವಿವೇಕ್ ಮೂರ್ತಿಗೆ ಅಮೆರಿಕದ ಕೊರೋನಾ ಟಾಸ್ಕ್’ಫೋರ್ಸ್‌ನಲ್ಲಿ ಸ್ಥಾನ?

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!