Sunday, July 3, 2022

ಕೊರೋನಾಗೆ ಹನುಮಾನ್ ಚಾಲೀಸಾ ಮದ್ದು- ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಗೆ ಟೀಕೆ

Follow Us

ಭೂಪಾಲ್‍: ಕೊರೋನಾ ವೈರಸ್ ಓಡಿಸಲು ಔಷಧ ಕಂಡುಹಿಡಿಯುತ್ತಿರುವ ಬೆನ್ನಲ್ಲೇ ಮಾರಕ ಕೊರೋನಾಗೆ ಹನುಮಾನ್ ಚಾಲೀಸ್ ಪರಿಹಾರ ಎಂದು ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಹೇಳುವ ಮೂಲಕ ಹೊಸ ವಿವಾದ ಹುಟ್ಟುಹಾಕಿದ್ದಾರೆ.
ದಿನಕ್ಕೆ 5 ಸಲ ಹನುಮಾನ್ ಚಾಲೀಸ್ ಪಠಿಸುವ ಮೂಲಕ ನೀವು ಕೊರೋನಾ ಓಡಿಸಬಹುದೆಂದು ಸಾಧ್ವಿ ಪ್ರಜ್ಞಾ ಸಿಂಗ್ ಹೇಳಿದ್ದು, ಇದಕ್ಕೆ ಎಲ್ಲೆಡೆ ಟೀಕೆಗಳು ವ್ಯಕ್ತವಾಗುತ್ತಿವೆ.
ಭೂಪಾಲ್‍ನಲ್ಲಿ ಜುಲೈ 24 ರಿಂದ ಅಗಸ್ಟ್ 4 ರ ತನಕ ಪ್ರತಿದಿನ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮ ಆರಂಭವಾಗಿದ್ದು, ಇದೊಂದೆ ಕೊರೋನಾ ವೈರಸ್ ಓಡಿಸಲು ಇರುವ ಮಾರ್ಗ. ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆಯಾಗಲಿದೆ. ನಾವು ಕೊರೋನಾ ಓಡಿಸಲು ಆಧ್ಯಾತ್ಮಿಕ ಮಾರ್ಗ ಅನುಸರಿಸೋಣ. ಹೀಗಾಗಿ ಹನುಮಾನ್ ಚಾಲೀಸಾ ಪಠಣ ಮಾಡಿದರೆ ನಾವು ಕೊರೋನಾದಿಂದ ಮುಕ್ತರಾಗಲು ಸಾಧ್ಯ ಎಂದು ಪ್ರಜ್ಞಾಸಿಂಗ್ ಹೇಳಿದ್ದಾರೆ.
2008 ರ ಮಾಲೇಗಾಂವ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಭೋಪಾಲ್ ಕ್ಷೇತ್ರದಿಂಧ ಸ್ಪರ್ಧಿಸಿ ಕಾಂಗ್ರೆಸ್‍ನ ದಿಗ್ವಿಜಯ್ ಸಿಂಗ್ ಎಂದು ಗೆಲುವು ಸಾಧಿಸಿದ್ದರು. ಈ ಹಿಂದೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣ, ಹೇಮಂತ್ ಕರ್ಕರೆ ಹಾಗೂ ನಾಥೂ ರಾಮ್ ಗೊಡ್ಸೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!