ಮುಂಬೈ: ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ಗಂಡು ಮಗುವಿನ ತಂದೆ. ಇನ್ ಸ್ಟಾಗ್ರಾಂ ನಲ್ಲಿ ಹಾರ್ದಿಕ್ ಪಾಂಡ್ಯ ಈ ಸಂತೋಷದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ನವಜಾತ ಶಿಶುವಿನ ಬೆರಳನ್ನು ಹಿಡಿದಿರುವ ಪೋಟೋವನ್ನು ಶೇರ್ ಮಾಡಿದ್ದಾರೆ.
ಲಾಕ್ ಡೌನ್ ಅವಧಿಯಲ್ಲಿ ಹಾರ್ದಿಕ್ ಪಾಂಡ್ಯಾ ರೂಪದರ್ಶಿ ನಟಾಶಾ ಸ್ಟಾಕೋವಿಕ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು.
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ , ಹಾರ್ದಿಕ್ ಪಾಂಡ್ಯ ಅವರಿಗೆ ಶುಭ ಕೋರಿದವರಲ್ಲಿ ಮೊದಲಿಗರಾಗಿದ್ದಾರೆ. ಕ್ರಿಕೆಟ್ ತಂಡದ ಎಲ್ಲ ಸದಸ್ಯರು ಮತ್ತು ಅಭಿಮಾನಿಗಳು ಹಾರ್ದಿಕ್ ಪಾಂಡ್ಯ ದಂಪತಿಗೆ ಶುಭ ಕೋರಿದ್ದಾರೆ.