Wednesday, October 5, 2022

ಕೇಂದ್ರ ಮುಖ್ಯ ಮಾಹಿತಿ ಆಯುಕ್ತರಾಗಿ ಹರ್ಷವರ್ಧನ್ ಸಿನ್ಹಾ ನೇಮಕ

Follow Us

NEWSICS.COM

ನವದೆಹಲಿ: ಕೇಂದ್ರ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಹರ್ಷವರ್ಧನ್ ಸಿನ್ಹಾ ನೇಮಕಗೊಂಡಿದ್ದಾರೆ.
ಇಂದು(ನ. 7,) ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಮ್ಮುಖದಲ್ಲಿ ಅಧಿಕಾರ ನೀಡಲಾಗಿದೆ ಎಂದು ಭವನ ಹೇಳಿಕೆಯಲ್ಲಿ ತಿಳಿಸಿದೆ.

ಆಗಸ್ಟ್ 26 ರಂದು ಬಿಮಲ್ ಜುಲ್ಕಾ ಅವರ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಎರಡು ತಿಂಗಳಿನಿಂದ ಈ ಹುದ್ದೆ ಖಾಲಿ ಇತ್ತು.

ಸಿಐಸಿ ಮತ್ತು ಮಾಹಿತಿ ಆಯುಕ್ತರನ್ನು ಐದು ವರ್ಷಗಳ ಅವಧಿಗೆ ಅಥವಾ ಅವರು 65 ವರ್ಷ ತುಂಬುವವರೆಗೆ ನೇಮಕ ಮಾಡಲಾಗುತ್ತದೆ. ಸಿನ್ಹಾಗೆ 62 ವರ್ಷವಾದ ಕಾರಣ ಇನ್ನೂ ಮೂರು ವರ್ಷ ಅಧಿಕಾರವಹಿಸಲಿದ್ದಾರೆ.

ಮಾಜಿ ರಾಜತಾಂತ್ರಿಕರಾಗಿದ್ದ ಸಿನ್ಹಾ ಅವರು 2019ರಲ್ಲಿ ಮಾಹಿತಿ ಆಯುಕ್ತರಾಗಿ ಸೇರಿಕೊಂಡಿದ್ದರು. ಅಲ್ಲದೆ ಸಿನ್ಹಾ ಯುನೈಟೆಡ್ ಕಿಂಗ್‌ಡಮ್ ಮತ್ತು ಶ್ರೀಲಂಕಾಗೆ ಭಾರತದ ಹೈಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ.

https://newsics.com/entertainment/kama-hassan-celebrate-his-66th-birthday/40393/

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!