newsics.com
ನವದೆಹಲಿ: ದೇಶವ್ಯಾಪಿ ಚರ್ಚೆಗೆ ಒಳಗಾಗಿರುವ ಹತ್ರಾಸ್ ಯುವತಿ ಅತ್ಯಾಚಾರ, ಕೊಲೆ ಪ್ರಕರಣ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಸುಪ್ರೀಂಕೋರ್ಟ್ ನಲ್ಲಿ ಪಿಐಎಲ್ ದಾಖಲಿಸಲಾಗಿದ್ದು, ಪ್ರಕರಣವನ್ನು ನಿವೃತ್ತ ಅಥವಾ ಹಾಲಿ ಸಿಬಿಐ ಅಥವಾ ಎಸ್ ಐಟಿ ಅಧಿಕಾರಿಗಳಿಗೆ ನೀಡಬೇಕೆಂದು ಮನವಿ ಸಲ್ಲಿಸಲಾಗಿದೆ. ಅಲ್ಲದೇ ಪ್ರಕರಣವನ್ನು ಉತ್ತರ ಪ್ರದೇಶದಿಂದ ದೆಹಲಿಗೆ ವರ್ಗಾಯಿಸುವಂತೆ ಮನವಿ ಮಾಡಿ ಪಿಐಎಲ್ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಎರಡು ವಾರದ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 19 ವರ್ಷದ ಯುವತಿ ಮಂಗಳವಾರ ಬೆಳಗ್ಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಈ ಸಂಬಂಧ ಉತ್ತರ ಪ್ರದೇಶ ಸರ್ಕಾರದ ಮೇಲೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಪ್ರೀಂ ಮೆಟ್ಟಿಲೇರಿದ ಹತ್ರಾಸ್ ಕೇಸ್
Follow Us