ದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೊಂದು ಭೀಕರ ಅಗ್ನಿ ಆಕಸ್ಮಿಕ ಸಂಭವಿಸಿದೆ. ಪೀರ್ ಗಢಿ ಪ್ರದೇಶದಲ್ಲಿ ಕಾರ್ಖಾನೆಯೊಂದು ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ತೀವ್ರತೆಗೆ ಕಾರ್ಖಾನೆ ಕುಸಿದು ಬಿದ್ದಿದೆ. ಕಾರ್ಖಾನೆ ಒಳಗಡೆ ಹಲವು ಮಂದಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿ ಕೂಡ ಸೇರಿದ್ದಾರೆ ಎಂದು ವರದಿಯಾಗಿದೆ. ಇದು ತೀವ್ರ ಆತಂಕಕ್ಕೆ ಕಾರಣವಾಗಿದೆ. 35ಕ್ಕೂಹೆಚ್ಚು ಅಗ್ನಿ ಶಾಮಕ ದಳ ಬೆಂಕಿ ನಂದಿಸುವಲ್ಲಿ ನಿರತವಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಕೂಡ ರಕ್ಷಣಾ ಕಾರ್ಯಾಚರಣೆಗೆ ಕೈ ಜೋಡಿಸಿದೆ.