Sunday, July 3, 2022

ಅಸ್ಸಾಂನಲ್ಲಿ ಭಾರೀ ಪ್ರವಾಹ; 53 ಲಕ್ಷ ಮಂದಿಗೆ ಸಂಕಷ್ಟ, 102 ಜನ ಸಾವು

Follow Us

♦ ಕಾಜಿರಂಗ ರಾಷ್ಟ್ರೀಯ ಉದ್ಯಾನ ಮುಳುಗಡೆ

ಗುವಾಹಟಿ: ಅಸ್ಸಾಂನ 30 ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಭೀಕರ ಪ್ರವಾಹ ಉಂಟಾಗಿದೆ. ಇದರಿಂದ 53,99,017 ಜನರು ಸಂಕಷ್ಟಕ್ಕೀಡಾಗಿದ್ದಾರೆ.
ಪ್ರವಾಹ ಸಂಬಂಧಿ ಪ್ರಕರಣಗಳಲ್ಲಿ ಒಟ್ಟೂ 102 ಮಂದಿ ಮೃತಪಟ್ಟಿದ್ದು, ನೆರೆಯಿಂದಾಗಿ 76, ಭೂ ಕುಸಿತದಿಂದ 26 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಜಿಲ್ಲಾಡಳಿತದ ನೆರವಿನೊಂದಿಗೆ ರಾಜ್ಯ ವಿಪತ್ತು ದಳದ ಸಿಬ್ಬಂದಿ 2,389 ಜನರನ್ನು ರಕ್ಷಿಸಿದ್ದಾರೆ. ಅಸ್ಸಾಂನ 3,014 ಗ್ರಾಮಗಳು ನೀರಿನಲ್ಲಿ ಮುಳುಗಡೆಯಾಗಿದ್ದು, 1,27,955,33 ಹೆಕ್ಟೇರ್‌ ಕೃಷಿ ಭೂಮಿ ನೀರಿನಿಂದ ಜಲಾವೃತಗೊಂಡಿದೆ. 487 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1.25 ಲಕ್ಷ ಜನರು ಆಶ್ರಯ ಪಡೆದಿದ್ದಾರೆ.
ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನ ಮುಳುಗಡೆಯಾಗಿದ್ದು, 76 ಪ್ರಾಣಿಗಳು ಮೃತಪಟ್ಟಿವೆ. 170 ಪ್ರಾಣಿಗಳನ್ನು ರಕ್ಷಿಸಲಾಗಿದೆ. ಖಡ್ಗಮೃಗಗಳ ಮುಖ್ಯ ಆವಾಸ ಸ್ಥಾನ ಎನಿಸಿರುವ ಉದ್ಯಾನದಲ್ಲಿ ಪ್ರಾಣಿಗಳು ಸಂಕಷ್ಟಕ್ಕೆ ಸಿಲುಕಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!