ಹೈದರಾಬಾದ್: ಕಳೆದ 24 ಗಂಟೆಯಲ್ಲಿ ಹೈದರಾಬಾದ್ ನಲ್ಲಿ ಭಾರೀ ಮಳೆಯಾಗುತ್ತಿದೆ. ನಗರದ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಬಂಜಾರ ಹಿಲ್ಸ್ ಮತ್ತು ಜುಬಿಲಿ ಹಿಲ್ಸ್ ಪರಿಸರದಲ್ಲಿ ಹಲವು ಮರಗಳು ಬುಡ ಸಮೇತ ಕಿತ್ತು ಬಿದ್ದಿವೆ. ಇದರಿಂದ ಸಂಚಾರಕ್ಕೆ ಅಡ್ಡಿಯಾಗಿದೆ.
ಇದೀಗ ಮಳೆ ಸ್ವಲ್ಪ ಬಿಡುವು ನೀಡಿದೆ. ಮುಂದಿನ ಒಂದೆರಡು ದಿನ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.