Thursday, August 18, 2022

ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ, ರೆಡ್ ಅಲರ್ಟ್ ಘೋಷಣೆ

Follow Us

newsics.com

ಮುಂಬೈ: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕೊಂಕಣ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಸತಾರ, ಕೊಲ್ಹಾಪುರ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಇದರಿಂದಾಗಿ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ಮಹಾರಾಷ್ಟ್ರದಲ್ಲಿ ಮಳೆಯ ಹಿನ್ನೆಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ.  ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರದ ಕಾರಣ ಬೆಳಗಾವಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದರೆ ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಸೃಷ್ಟಿಯಾಗುವ ಸಾಧ್ಯತೆ ಇದೆ.

ದೂದ್ ಗಂಗಾ ಮತ್ತು ವೇದ್ ಗಂಗಾ ನದಿಗಳು ತುಂಬಿ ಹರಿಯುತ್ತಿವೆ.

ಇನ್ನೊಂದೆಡೆ ಕರ್ನಾಟಕದಲ್ಲಿ ಮಳೆ ಬಿರುಸುಪಡೆದುಕೊಂಡಿದೆ. ಹೊನ್ನಾವರದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೂ ಕುಸಿತ ಸಂಭವಿಸಿದೆ. ಇದರಿಂದ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!