ಮುಂಬೈ: ಮಹಾನಗರ ಮುಂಬೈನಲ್ಲಿ ನಿರಂತರ ಮಳೆಯಾಗುತ್ತಿದೆ. ಮಾಟುಂಗಾ, ದಾದರ್ ಸೇರಿದಂತೆ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮಹಾ ಮಳೆಗೆ ಮಾಯಾ ನಗರಿ ಮುಂಬೈ ತತ್ತರಿಸಿ ಹೋಗಿದೆ. ಮುಂಬೈನಲ್ಲಿ ಜನರು ಮನೆಯಿಂದ ಹೊರಬಾರದಂತೆ ಮನವಿ ಮಾಡಲಾಗಿದೆ.
ಇನ್ನೊಂದೆಡೆ ಕರಾವಳಿ ತೀರದಲ್ಲಿ ಸಮುದ್ರದ ಅಲೆಗಳು ಗಾಬರಿ ಹುಟ್ಟಿಸುತ್ತಿವೆ. ದೈತ್ಯಾಕಾರದ ಅಲೆಗಳು ಸೃಷ್ಟಿಯಾಗುತ್ತಿದ್ದು, 4. 51 ಮೀಟರ್ ಎತ್ತರದ ಅಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಮುಂಬೈ ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ. ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಮುಂದಿನ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರೆಡ್ ಅಲರ್ಟ್ ಘೋಷಿಸಲಾಗಿದೆ.
ನಟ ಸುಶಾಂತ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ನೀಡಬೇಕೆಂದು ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು (ಆ.4) ನಡೆಯಬೇಕಿತ್ತು. ಭಾರೀ ಮಳೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಿಕೆಯಾಗಿದೆ.
ಸುಶಾಂತ್ ಸಿಂಗ್ ನಿಗೂಢ ಸಾವು: ಸಿಬಿಐ ತನಿಖೆಗೆ ಬಿಹಾರ ಸರ್ಕಾರ ಶಿಫಾರಸು
ಮುಂಬೈ ನಗರದಾದ್ಯಂತ ಪ್ರವಾಹ ಭೀತಿ ಎದುರಾಗಿದ್ದು, ಈಗಾಗಲೇ ತಗ್ಗು ಪ್ರದೇಶಗಳಲ್ಲಿನ ಜನಜೀವನ ಅಸ್ಥವ್ಯಸ್ಥಗೊಂಡಿದೆ. ನಗರದಲ್ಲಿ ಸಂಚರಿಸುವ ರೈಲು ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ.