newsics.com
ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಮುಂಬೈ ವಿಮಾನ ನಿಲ್ದಾಣದಲ್ಲಿ ಭಾರಿ ಜನ ಸಂದಣಿ ಏರ್ಪಟ್ಟಿದೆ. ಚೆಕ್ ಇನ್ ಗಾಗಿ ಉದ್ದದ ಸಾಲು ಸೃಷ್ಟಿಯಾಗಿದೆ.
ಇದರಿಂದಾಗಿ ಹಲವು ಪ್ರಯಾಣಿಕರು ಇಂದು ವಿಮಾನ ಮಿಸ್ ಮಾಡಿದ್ದಾರೆ ಎಂದು ವರದಿಯಾಗಿದೆ.
ದಸರಾ ಹಿನ್ನೆಲೆಯಲ್ಲಿ ಸಾಲು ಸಾಲು ರಜೆಯ ಕಾರಣ ಹೆಚ್ಚಿನ ಪ್ರಯಾಣಿಕರು ಊರುಗಳಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಪ್ರಯಾಣಿಕರು ಎರಡು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣ ತಲುಪಬೇಕು ಎಂದು ವಿಮಾನ ಸಂಸ್ಥೆಗಳು ಮನವಿ ಮಾಡಿವೆ