Sunday, July 3, 2022

ಅಕ್ರಮ ಚಿನ್ನ ಸಾಗಾಟ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ನಕಾರ

Follow Us

ಕೊಚ್ಚಿ: ಕೇರಳದ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ 30 ಕಿಲೋ ಚಿನ್ನ ಕಳ್ಳ ಸಾಗಾಟ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ಬೇಡಿಕೆಯನ್ನು ಕೇರಳ ಹೈಕೋರ್ಟ್ ತಳ್ಳಿಹಾಕಿದೆ. ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾದಳ ತನಿಖೆ ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಇದೇ ವೇಳೆ  ಚಿನ್ನ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಂಮ್ಸ್  ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು  ಅಬ್ದುಲ್ ಸಲಾಂ ಎಂದು ಗುರುತಿಸಲಾಗಿದೆ. ಅಬ್ಬುಲ್ ಸಲಾಂ ಚಿನ್ನ ಖರೀದಿಗಾಗಿ ಹಣದ ವ್ಯವಸ್ಥೆ ಮಾಡಿದ್ದ ಎಂದು ಆರೋಪಿಸಲಾಗಿದೆ.

ಚಿನ್ನ ಮಾರಾಟದಿಂದ ಬಂದ ಹಣವನ್ನು ಏನು ಮಾಡುತ್ತಿದ್ದರು ಎಂಬ ಬಗ್ಗೆ ರಾಷ್ಟ್ರೀಯ ತನಿಖಾದಳ ಗಮನ ಕೇಂದ್ರೀಕರಿಸಿದೆ. ಆರೋಪಿಗಳಾದ ಸ್ವಪ್ನಾ ಸುರೇಶ್ ಮತ್ತು ಇತರ ಆೋಪಿಗಳು ಟೆಲಿಗ್ರಾಫ್ ಆಪ್ ಮೂಲಕ ಪರಸ್ಪರ ಸಮಾಲೋಚನೆ ನಡೆಸುತ್ತಿದ್ದರು ಎಂಬ ಮಾಹಿತಿ ತನಿಖೆ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!