Monday, April 12, 2021

ಕೇರಳದಲ್ಲಿ ಅತ್ಯಧಿಕ ಕೊರೋನಾ : ಕಾಸರಗೋಡಿನಲ್ಲಿ ಏಳು ಮಂದಿಗೆ ಸೋಂಕು

ತಿರುವನಂತಪುರಂ: ಕೇರಳದಲ್ಲಿ ಅತ್ಯಧಿಕ ಕೊರೋನಾ ಪ್ರಕರಣ ವರದಿಯಾಗಿದೆ. ಶುಕ್ರವಾರ 211 ಮಂದಿಯಲ್ಲಿ ಕೊರೋನಾ ರೋಗ ಲಕ್ಷಣ ದೃಢಪಟ್ಟಿದೆ. ಇದು ಕೇರಳದಲ್ಲಿ ಇದುವರೆಗಿನ ಅತ್ಯಧಿಕ ಸಂಖ್ಯೆಯಾಗಿದೆ. ಸೋಂಕಿನ ಮೂಲ ಪತ್ತೆಯಾಗದಿರುವುದು ಕೇರಳದಲ್ಲಿ ಆತಂಕ ಮೂಡಿಸಿದೆ. ರೋಗಿಗಳ ಸಂಪರ್ಕದಿಂದಲೂ ರೋಗ ಹರಡುತ್ತಿದೆ. ಕೊರೋನಾ ಸೋಂಕಿಗೆ ತುತ್ತಾದ 211 ಮಂದಿಯ ಪೈಕಿ 29 ಮಂದಿ ವಿದೇಶದಿಂದ ಬಂದವರಾಗಿದ್ದಾರೆ. 39 ಮಂದಿ ಇತರ ರಾಜ್ಯಗಳಿಂದ ಕೇರಳಕ್ಕೆ ಹಿಂತಿರುಗಿದವರಾಗಿದ್ದಾರೆ.  27 ಮಂದಿಗೆ ಕೊರೋನಾ ರೋಗಿಗಳ ಸಂಪರ್ಕದಿಂದಾಗಿ ವೈರಸ್ ದಾಳಿ ನಡೆಸಿದೆ. ಕಾಸರಗೋಡಿನಲ್ಲಿ ಹೊಸದಾಗಿ ಏಳು ಮಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದಿದೆ. ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಿರುವನಂತಪುರಂ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಕಠಿಣ ನಿರ್ಬಂಧ ವಿಧಿಸಲಾಗಿದೆ. ಮಲಪುರಂ ಜಿಲ್ಲೆಯಲ್ಲಿ  ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!