Friday, September 30, 2022

ಹಿಜಾಬ್ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Follow Us

newsics.com

ನವದೆಹಲಿ:  ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಪೂರ್ಣಗೊಳಿಸಿದೆ. ಸತತ 10 ದಿನ ವಿಚಾರಣೆ ನಡೆಸಿರುವ ಸರ್ವೋಚ್ಚ ನ್ಯಾಯಾಲಯ ಇದೀಗ ತೀರ್ಪನ್ನು ಕಾಯ್ದಿರಿಸಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ 17 ಮೇಲ್ಮನವಿಗಳು ಸಲ್ಲಿಕೆಯಾಗಿದ್ದವು. 10 ದಿನ ನಡೆದ ವಿಚಾರಣೆ ಅತ್ಯಂತ ಆಸಕ್ತಿದಾಯಕವಾಗಿತ್ತು.  ಅರ್ಜಿದಾರರ ಪರ ವಕೀಲರು ಮತ್ತು ಸರ್ಕಾರದ ವಕೀಲರು  ಅತ್ಯಂತ ಸಮರ್ಥವಾಗಿ ವಾದ ಮಂಡಿಸಿದ್ದರು.

ರಾಜ್ಯ ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದರು.  ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಕೂಡ ರಾಜ್ಯ ಸರ್ಕಾರದ ಪರವಾಗಿ ವಾದಿಸಿದ್ದರು. ಹಿಜಾಬ್ ಧರಿಸಲು ತರಗತಿಯೊಳಗೆ ಮಾತ್ರ ಅವಕಾಶ ಇಲ್ಲ . ಉಳಿದಂತೆ ಯಾವುದೇ ನಿರ್ಬಂಧ ಇಲ್ಲ ಎಂಬ ವಾದವನ್ನು ರಾಜ್ಯ ಸರ್ಕಾರದ ವಕೀಲರು ಮಂಡಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!