Tuesday, April 13, 2021

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಹಾಕಿ ಪಟು ರಾಣಿ ಹೆಸರು ಶಿಫಾರಸು

ನವದೆಹಲಿ: ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಾರತದ ಮಹಿಳಾ ಹಾಕಿ ತಂಡದ ನಾಯಕಿ ರಾಣಿ  ರಾಮ್ ಪಾಲ್ ಅವರ ಹೆಸರನ್ನು  ಭಾರತ ಹಾಕಿ ಫೆಡರೇಷನ್ ಸೂಚಿಸಿದೆ. ಅರ್ಜುನ ಪ್ರಶಸ್ತಿಗೆ  ಹಾಕಿ ಪಟುಗಳಾದ  ವಂದನಾ ಕತಾರಿಯಾ, ಮೋನಿಕಾ ಮತ್ತು ಹರ್ಮನ್  ಪ್ರೀತ್  ಸಿಂಗ್ ಹೆಸರನ್ನು ಹಾಕಿ ಫೆಡರೇಷನ್ ಶಿಫಾರಸು ಮಾಡಿದೆ. ಕಳೆದ ಮೂರು ವರ್ಷಗಳಿಂದ ಭಾರತ ಮಹಿಳಾ ಹಾಕಿ ತಂಡದ ನಾಯಕಿಯಾಗಿದ್ದಾರೆ ರಾಣಿ, 2017ರಲ್ಲಿ ಏಷ್ಯಾ ಕಪ್, 2018ರಲ್ಲಿ  ಏಷ್ಯನ್  ಗೇಮ್ಸ್ ನಲ್ಲಿ   ರಾಣಿ ನೇತೃತ್ವದ ಹಾಕಿ ತಂಡ ಬೆಳ್ಳಿ ಪದಕ ಗಳಿಸಿತ್ತು. ರಾಣಿ ರಾಮ್ ಪಾಲ್ ಅವರ ಸಾಧನೆಯಿಂದಾಗಿ ಭಾರತ ಮಹಿಳಾ ಹಾಕಿ ತಂಡ ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದಲ್ಲಿ ಆಡುವ ಅರ್ಹತೆ ಪಡೆದಿದೆ.  2016 ಜನವರಿ 1ರಿಂದ 2019 ಡಿಸೆಂಬರ್ 31ರ ವರೆಗಿನ ಸಾಧನೆಯನ್ನು  ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಮಾನದಂಡವಾಗಿ ಪರಿಗಣಿಸಲಾಗುತ್ತಿದೆ. ರಾಣಿ ಅವರಿಗೆ 2016ರಲ್ಲಿ ಅರ್ಜುನ ಪ್ರಶಸ್ತಿ ಮತ್ತು 2020ರಲ್ಲಿ ಪದ್ಮ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!