Saturday, April 17, 2021

ಒತ್ತೆಯಾಳುಗಳ ಬಿಡುಗಡೆ: ಹುತಾತ್ಮರಾದ ಐವರು ಯೋಧರು

ಶ್ರೀನಗರ: 12 ಗಂಟೆಗೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕರು ಮನೆಯಲ್ಲಿ ಒತ್ತೆಸೆರೆಯಲ್ಲಿ ಇರಿಸಿದ್ದ ಎಲ್ಲರನ್ನು ಬಂಧಮುಕ್ತಗೊಳಿಸುವಲ್ಲಿ ಭದ್ರತಾಪಡೆಗಳು ಯಶಸ್ವಿಯಾಗಿವೆ. ಆದರೆ ಈ ಕಾರ್ಯಾಚರಣೆಯಲ್ಲಿ  ಕರ್ನಲ್ ಹುದ್ದೆಯ ಅಧಿಕಾರಿ ಸಹಿತ ಐವರು ಯೋಧರು ತಮ್ಮ  ಪ್ರಾಣ ಅರ್ಪಿಸಿದ್ದಾರೆ. ಉತ್ತರ ಕಾಶ್ಮೀರದ ಹಂದ್ವಾರದಲ್ಲಿ ಈ ಘಟನೆ ನಡೆದಿದೆ. ಮನೆಯೊಂದಕ್ಕೆ ನುಗ್ಗಿದ ಭಯೋತ್ಪಾದಕರು ಮನೆಯಲ್ಲಿದ್ದ ಎಲ್ಲರನ್ನು ಒತ್ತೆಸೆರೆಯಲ್ಲಿಟ್ಟಿದ್ದರು. ಇವರನ್ನು ಬಂಧಮುಕ್ತಗೊಳಿಸಲು ಶನಿವಾರ ಸಂಜೆ ಕಾರ್ಯಾಚರಣೆ ಆರಂಭಿಸಲಾಯಿತು. 12 ತಾಸುಗಳ ಕಾಲ ನಡೆದ ಗುಂಡಿನ ಚಕಮಕಿಯ ಬಳಿಕ ಎಲ್ಲರನ್ನು ಬಿಡುಗಡೆ ಮಾಡುವಲ್ಲಿ ಭದ್ರತಾಪಡೆಗಳು ಯಶಸ್ವಿಯಾದವು. ಈ ಕಾರ್ಯಾಚರಣೆಯಲ್ಲಿ  ಕರ್ನಲ್ ಅಶುತೋಷ್ ಶರ್ಮಾ ಸೇರಿದಂತೆ ಐವರು ಅಧಿಕಾರಿಗಳು ಹುತಾತ್ಮರಾದರು. ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭದ್ರತಾಪಡೆಗಳು ಯಶಸ್ವಿಯಾಗಿದ್ದು, ಅಪಾರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!