Friday, May 20, 2022

ವಿಶ್ವಸಂಸ್ಥೆಯ ನಿರ್ಧಾರಕ ರಚನೆಗಳಿಂದ ಭಾರತವನ್ನು ಎಷ್ಟು ದಿನ ದೂರ ಇಡ್ತೀರಿ? ಮೋದಿ ಪ್ರಶ್ನೆ

Follow Us

newsics.com
ನವದೆಹಲಿ: ವಿಶ್ವಸಂಸ್ಥೆಯ ನಿರ್ಧಾರ ತೆಗೆದುಕೊಳ್ಳುವ ರಚನೆಗಳಿಂದ ಭಾರತವನ್ನು ಎಷ್ಟು ಸಮಯ ದೂರ ಇಡುತ್ತೀರಿ ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು 1.3 ಶತಕೋಟಿ ಜನರಿಗೆ ನೆಲೆಯಾಗಿರುವ ಭಾರತವನ್ನು ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಸಂದರ್ಭದಲ್ಲಿ ಹೊರಗಿಡುವುದು ಸರಿಯಲ್ಲ ಎಂದು ಮೋದಿ ಅಭಿಪ್ರಾಯಪಟ್ಟರು.
ವಿಶ್ವಸಂಸ್ಥೆ ಮಹಾ ಅಧಿವೇಶನ 75ನೇ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, 2021ರ ಜನವರಿ 1ರಿಂದ 15 ಸದಸ್ಯರ ಪರಿಷತ್ತಿನ ಚುನಾಯಿತ ಖಾಯಂ ಸದಸ್ಯರಾಗಿ ಭಾರತ ತನ್ನ ಎರಡು ವರ್ಷಗಳ ಅವಧಿಯನ್ನು ಪ್ರಾರಂಭಿಸಲಿರುವುದರಿಂದ ವಿಶ್ವಸಂಸ್ಥೆಯ ಸುಧಾರಣೆಗಳಿಗಾಗಿ ಪ್ರಬಲ ಭದ್ರತಾ ಮಂಡಳಿಯನ್ನು ವಿಸ್ತರಿಸುವ ಸಮಯ ಬಂದಿದೆ ಎಂದರು. ವಿಶ್ವಸಂಸ್ಥೆಯ ಸುಧಾರಣೆಗಳು ಪೂರ್ಣಗೊಳ್ಳುವ ಪ್ರಕ್ರಿಯೆಗಾಗಿ ಭಾರತದ ಜನರು ಬಹಳ ಸಮಯದಿಂದ ಕಾಯುತ್ತಿದ್ದಾರೆ ಎಂಬುದು ನಿಜ. ಇಂದು ಈ ಸುಧಾರಣಾ ಪ್ರಕ್ರಿಯೆಯು ಎಂದಾದರೂ ತನ್ನ ತಾರ್ಕಿಕ ತೀರ್ಮಾನಕ್ಕೆ ತಲುಪುತ್ತದೆಯೇ ಎಂದು ಭಾರತದ ಜನರು ಕಳವಳ ವ್ಯಕ್ತಪಡಿಸಿದ್ದಾರೆ. ವಿಶ್ವಸಂಸ್ಥೆಯಲ್ಲಿ ಸ್ಥಿರತೆ ಮತ್ತು ವಿಶ್ವಸಂಸ್ಥೆಯ ಮಂಡಳಿಯ ಸಬಲೀಕರಣವು ವಿಶ್ವದ ಕಲ್ಯಾಣಕ್ಕಾಗಿ ಅವಶ್ಯಕವಾಗಿದೆ ಎಂದರು.

ಖಾಸಗಿ ಲ್ಯಾಬ್’ಗಳಲ್ಲಿನ ಕೊರೋನಾ ತಪಾಸಣೆ ದರ ಮತ್ತೆ ಇಳಿಕೆ

ಮತ್ತಷ್ಟು ಸುದ್ದಿಗಳು

Latest News

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆಯಾಗಿದೆ. ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ...
- Advertisement -
error: Content is protected !!