Saturday, April 17, 2021

ಹೈದರಾಬಾದ್ ತಲುಪಿದ ಕರ್ನಲ್ ಸಂತೋಷ್ ಬಾಬು ಪಾರ್ಥಿವ ಶರೀರ

ಹೈದರಾಬಾದ್: ಗಡಿ ತಂಟೆಕೋರ ಚೀನಾ ಯೋಧರ ದಾಳಿಯನ್ನು ಸಮರ್ಥವಾಗಿ ಎದುರಿಸಿ ವೀರ ಮರಣವನ್ನಪ್ಪಿದ ಕರ್ನಲ್ ಸಂತೋಷ್ ಬಾಬು ಅವರ ಪಾರ್ಥಿವ ಶರೀರ ಹೈದರಾಬಾದ್ ತಲುಪಿದೆ. ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಲಾಯಿತು. ಹೈದರಾಬಾದ್ ಪೊಲೀಸ್ ಕಮಿಷನರ್ ಅಂಜನಿ ಕುಮಾರ್ ಅವರು ವಿಮಾನ ನಿಲ್ದಾಣದಲ್ಲಿ ಗೌರವ ನಮನ ಸಲ್ಲಿಸಿದರು. ಕರ್ನಲ್ ಸಂತೋಷ್ ಬಾಬು ಹೈದರಾಬಾದ್ ಸಮೀಪದ ಸೂರ್ಯಪೇಟ್ ನಿವಾಸಿಯಾಗಿದ್ದಾರೆ.  ಸೈನಿಕ ಶಾಲೆಯಲ್ಲಿ ಕಲಿತ ಸಂತೋಷ್ ಬಾಬು, ಕಾಶ್ಮೀರದಲ್ಲಿ ಭಯೋತ್ಪಾದನ ನಿಗ್ರಹ ಕಾರ್ಯಾಚರಣೆಯಲ್ಲಿ ಕೂಡ ಭಾಗವಹಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!