newsics.com
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಐಎಎಸ್ ಅಧಿಕಾರಿಗಳ ಸೇವಾ ನಿಯಮ ಬದಲಾವಣೆಗೆ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಇದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.
ಈ ಸಂಬಂಧ ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಹೊಸ ಮಾರ್ಗಸೂಚಿ ಪ್ರಕಾರ ಕೇಂದ್ರ ಸರ್ಕಾರ, ಯಾವುದೇ ಐಎಎಸ್ ಅಧಿಕಾರಿಯನ್ನು ಕೇಂದ್ರದ ಸೇವೆಗೆ ಬಳಸಿಕೊಳ್ಳಬಹುದಾಗಿದೆ. ಐಎಎಸ್ ಅಧಿಕಾರಿಗಳು ಕೇಂದ್ರ ಸೇವೆಗೆ ತೆರಳಲು ಹಿಂದೇಟು ಹಾಕುತ್ತಿರುವ ಕಾರಣ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ವರದಿಯಾಗಿದೆ.