newsics.com
ನವದೆಹಲಿ: 2028ರ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಅನ್ನು ಸೇರಿಸಲು ಐಸಿಸಿ ನಿರ್ಧರಿಸಿದೆ. ಹೀಗಾಗಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೆ ಬಿಡ್ ಸಲ್ಲಿಸುವುದಾಗಿ ಮಂಗಳವಾರ ಖಚಿತಪಡಿಸಿದೆ. ಕೆಲವು ವರ್ಷಗಳಿಂದ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರಿಸುವ ವಿಚಾರವಾಗಿ ಐಸಿಸಿ ಪ್ರಯತ್ನಿಸುತ್ತಿದೆ. ಇದೀಗ ಭಾರತೀಯ ಕ್ರಿಕೆಟ್ ಮಂಡಳಿ ಕೂಡ ಬೆಂಬಲ ನೀಡಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟಪಡಿಸಿದ್ದಾರೆ.
ಪ್ರಪಂಚದಾದ್ಯಂತ ಕ್ರಿಕೆಟ್ ಗೆ ನೂರಾರು ಕೋಟಿ ಅಭಿಮಾನಿಗಳನ್ನು ಹೊಂದಿದ್ದೇವೆ. ಅದರಲ್ಲಿ ಶೇ.90ರಷ್ಟು ಮಂದಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ನೋಡಲು ಬಯಸುತ್ತಿದ್ದಾರೆ. ಆದ್ದರಿಂದ ಒಲಿಂಪಿಕ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಉತ್ತಮ ಸೇರ್ಪಡೆಯಾಗಬಹುದೆಂದು ನಾವು ನಂಬುತ್ತೇವೆ ಎಂದು ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೆ ಐಸಿಸಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
2028ರ ಒಲಿಂಪಿಕ್ಸ್’ಗೆ ಕ್ರಿಕೆಟ್ ಸೇರ್ಪಡೆಗೆ ಬಿಡ್ ಸಲ್ಲಿಸಲು ಮುಂದಾದ ಐಸಿಸಿ
Follow Us