Wednesday, November 30, 2022

ಐಸಿಸಿ ಟೆಸ್ಟ್: ಸಂಕಷ್ಟದಲ್ಲಿ ಕೊಹ್ಲಿ ಪಡೆ, ಆಟ ಸ್ಥಗಿತ

Follow Us

newsics.com

ಸೌಂತಾಪ್ಟನ್: ಭಾರತ-ನ್ಯೂಜಿಲ್ಯಾಂಡ್ ತಂಡಗಳ ನಡುವೆ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತಿರುವ ಟೀಂ ಇಂಡಿಯಾ ಬ್ಯಾಟಿಂಗ್ ನಡೆಸುತ್ತಿದ್ದು, ಚಹಾ ವಿರಾಮದ ವೇಳೆಗೆ ಕೊಹ್ಲಿ ಪಡೆ 3 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿದೆ. ಹೀಗಾಗಿ ಕೊಹ್ಲಿ ಪಡೆ ಎದುರಾಳಿ ಬೌಲಿಂಗ್ ದಾಳಿಗೆ ತತ್ತರಿಸಿ ಆರಂಭಿಕ ಆಘಾತಕ್ಕೊಳಗಾಗಿದೆ.

ಮೊದಲ ದಿನ ಮಳೆ ಸುರಿದ ಕಾರಣ ಎರಡನೇ ದಿನವೂ ಹವಾಮಾನ ವೈಪರೀತ್ಯದಿಂದಾಗಿ ಬ್ಯಾಡ್ ಲೈಟ್ ನಿಂದಾಗಿ ಆಗಾಗ ಆಟ ನಿಲ್ಲಿಸಬೇಕಾಯಿತು. ಅಂತಿಮ ಸೆಷನ್ ಆಟದ ವೇಳೆ ಮೋಡ ಕವಿದ ವಾತಾವರಣ ಹಿನ್ನೆಲೆಯಲ್ಲಿ ಆಟ ಸ್ಥಗಿತಗೊಳಿಸಲಾಗಿದೆ.

ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ(34ರನ್) ಹಾಗೂ ಶುಬ್ಮನ್ ಗಿಲ್(28ರನ್) ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು. ಈ ಜೋಡಿ ಮೊದಲ ವಿಕೆಟ್ ನಷ್ಟವಿಲ್ಲದೆ 62 ರನ್ ಗಳಿಸಿತು. ಆದರೆ, ಇದರ ಬೆನ್ನಲ್ಲೇ ಎರಡು ವಿಕೆಟ್ ಪತನಗೊಳ್ಳುತ್ತಿದ್ದಂತೆ ಟೀಂ ಇಂಡಿಯಾ ಸಂಕಷ್ಟಕ್ಕೊಳಗಾಯಿತು.

ಚೇತೇಶ್ವರ ಪೂಜಾರಾ ಹಾಗೂ ವಿರಾಟ್ ಕೊಹ್ಲಿ ತಂಡಕ್ಕೆ ಮತ್ತೊಮ್ಮೆ ಚೇತರಿಕೆ ನೀಡುವ ಕೆಲಸ ಮಾಡಿತು. 54 ಎಸೆತ ಎದುರಿಸಿ 8 ರನ್ ಗಳಿಕೆ ಮಾಡಿದ್ದ ಪೂಜಾರಾ ಎಲ್ಬಿ ಬಲೆಗೆ ಬಿದ್ದರು. ಸದ್ಯ 44 ರನ್ ಗಳಿಸಿರುವ ಕೊಹ್ಲಿ ಹಾಗೂ 29 ರನ್ ಗಳಿಸಿರುವ ರಹಾನೆ ಮೈದಾನದಲ್ಲಿದ್ದಾರೆ.

ನ್ಯೂಜಿಲ್ಯಾಂಡ್ ಪರ ಬೌಲ್ಟ್, ಜೇಮಿಸನ್ ಹಾಗೂ ವ್ಯಾಗ್ನರ್ ತಲಾ 1ವಿಕೆಟ್ ಪಡೆದುಕೊಂಡಿದ್ದು, ನ್ಯೂಜಿಲ್ಯಾಂಡ್ ತಂಡಕ್ಕೆ ಆರಂಭಿಕ ಮುನ್ನಡೆ ತಂದುಕೊಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!