ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರ- ಬಾರಮುಲ್ಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡಗಿಸಿಡಲಾಗಿದ್ದ ಸುಧಾರಿತ ಸ್ಫೋಟಕ ವಸ್ತುವನ್ನು ಪತ್ತೆ ಹಚ್ಚಿ ನಾಶಗೊಳಿಸಲಾಗಿದೆ. ಇದರಿಂದ ಭಾರೀ ದುರಂತವನ್ನು ತಪ್ಪಿಸಿದಂತಾಗಿದೆ. ರಾಷ್ಟ್ರೀಯ ರೈಫಲ್ಸ್ ಯೋಧರು ಶೋಧ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಸ್ಫೋಟಕ ವಸ್ತುವನ್ನು ಪತ್ತೆ ಹಚ್ಚಿದ್ದರು. ಬಳಿಕ ಅದನ್ನು ನಾಶಪಡಿಸಲಾಯಿತು.
ಈ ಮಧ್ಯೆ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಉಪಟಳ ಮುಂದುವರಿದಿದೆ. ಪೂಂಛ್ ಜಿಲ್ಲೆಯ ಕೃಷ್ಣಾ ಘಾಟಿ ಪ್ರದೇಶದಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಭಾರತದ ನೆಲೆಗಳನ್ನು ಗುರಿಯಾಗಿರಿಸಿ ದಾಳಿ ನಡೆಸಿದೆ. ಪಾಕ್ ಕೃತ್ಯಕ್ಕೆ ಭಾರತದ ಯೋಧರು ದಿಟ್ಟ ಪ್ರತ್ಯುತ್ತರ ನೀಡಿದ್ದಾರೆ.