ಮುಂಬೈ: ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 7,975 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟೂ ಸೋಂಕಿತರ ಸಂಖ್ಯೆ 2,75,640ಕ್ಕೇರಿದೆ.
ಮಹಾರಾಷ್ಟ್ರ ಆರೋಗ್ಯ ಇಲಾಖೆ ಈ ಮಾಹಿತಿ ನೀಡಿದ್ದು, ಮಂಗಳವಾರ ಒಂದೇ ದಿನ 7,975 ಕೊರೋನಾ ವೈರಸ್ ಕೇಸ್ಗಳು ಪತ್ತೆಯಾಗಿದ್ದು, ಆ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 2,75,640ಕ್ಕೆ ಏರಿಕೆಯಾಗಿದೆ. ಬುಧವಾರ ಒಂದೇ ದಿನ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ 233 ಮಂದಿ ಬಲಿಯಾಗಿದ್ದು, ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 10928ಕ್ಕೆ ಏರಿಕೆಯಾಗಿದೆ.
ಏರ್ ಇಂಡಿಯಾ ನೌಕರರಿಗೆ 5 ವರ್ಷಗಳ ವೇತನರಹಿತ ಕಡ್ಡಾಯ ರಜೆ!
ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,52,613ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,11,801 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.