Tuesday, April 13, 2021

ಲಾಕ್’ಡೌನ್ ವೇಳೆ ಮಕ್ಕಳ ಕಳ್ಳಸಾಗಣೆ ಹೆಚ್ಚಳ- ಸುಪ್ರೀಂ ಕಳವಳ

ನವದೆಹಲಿ: ಲಾಕ್‍ಡೌನ್ ಸಮಯದಲ್ಲಿ ಮಕ್ಕಳ ಕಳ್ಳಸಾಗಣೆ ದಂಧೆ ಹೆಚ್ಚಾಗಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ನ್ಯಾಯಪೀಠವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಎನ್‍ಡಿಎಂಎಗೆ ನೋಟಿಸ್ ಜಾರಿಗೊಳಿಸಿದೆ.
ಲಾಕ್‍ಡೌನ್ ವೇಳೆ ಮಕ್ಕಳನ್ನು ಕಳ್ಳ ಸಾಗಣೆ ಮಾಡುವ ದಂಧೆಯಲ್ಲಿ ಹಠಾತ್ ಏರಿಕೆ ಕಂಡುಬಂದಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಚ್‍ಪನ್ ಬಚಾವ್ ಆಂದೋಲನ್ ಎಂಬ ಸರ್ಕಾರೇತರ ಸಂಸ್ಥೆ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ವಿಡಿಯೋ ಕಾನ್ಫರೆನ್ಸ್ ಮೂಲಕ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ನಿಗಾ ವಹಿಸಲು ತಜ್ಞರ ಸಮಿತಿಯೊಂದನ್ನು ರಚಿಸಬೇಕು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನೆರವು ಪಡೆಯುವಂತೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!