ನವದೆಹಲಿ: ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿದೆ. ಈ ಸಂಬಂಧ ಕೇಂದ್ರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಿ. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರನ್ನು ಅಥವಾ ಕೊರೋನಾದಿಂದ ಗುಣಮುಖರಾದವರನ್ನು ಆಹ್ವಾನಿಸಿ ಎಂದು ಸೂಚಿಸಿದೆ.
ಈ ಬಾರಿ ರಾಜ್ಯಪಾಲರು ರಾಜಭವನದಲ್ಲಿದ್ದುಕೊಂಡೇ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಾಧ್ಯವಾದಷ್ಟು ಆನ್ ಲೈನ್ ವ್ಯವಸ್ಥೆ ಮೂಲಕ ಸಮಾರಂಭ ಏರ್ಪಡಿಸಿ ಎಂದು ಕೇಂದ್ರ ಸರ್ಕಾರ ಹೇಳಿದೆ.
ಕೊರೋನಾದ ಹಿನ್ನೆಲೆಯಲ್ಲಿ ಈ ಬಾರಿ ಕೆಂಪುಕೋಟೆಯಲ್ಲಿ ಕೂಡ ಸರಳವಾಗಿ ಸ್ವಾತಂತ್ರ್ಯ ದಿನದ ಕಾರ್ಯಕ್ರಮ ನಡೆಯಲಿದೆ.