Tuesday, April 13, 2021

ಭಾರತ- ಚೀನಾ ಸಂಘರ್ಷ-ಮಾತುಕತೆಯಲ್ಲಿ ಸ್ವಲ್ಪ ಪ್ರಗತಿ

ನವದೆಹಲಿ: ಲಡಾಕ್ ಸಮೀಪದ  ಗಲ್ವಾನ್ ಕಣಿವೆ ಬಳಿ ಸಂಭವಿಸಿದ ಭಾರತ- ಚೀನಾ ಯೋಧರ ನೇರ ಮುಖಾಮುಖಿ ಹಿನ್ನೆಲೆಯಲ್ಲಿ  ತಲೆದೋರಿರುವ ಉದ್ವಿಗ್ನ ಪರಿಸ್ಥಿತಿ ನಿವಾರಿಸಲು ಉಭಯ ದೇಶಗಳ ಮೇಜರ್ ಜನರಲ್ ಮಟ್ಟದ ಮಾತುಕತೆ ಇಂದು ಕೂಡ ಮುಂದುವರಿಯಲಿದೆ. ಗುರುವಾರ ನಡೆದ ಮಾತುಕತೆಯಲ್ಲಿ ಸ್ವಲ್ಪ ಪ್ರಗತಿ ಸಾಧಿಸಿದೆ ಎಂದು ವರದಿಯಾಗಿದೆ. ಆದರೆ ಒಪ್ಪಂದಕ್ಕೆ ಬರಲು ಇನ್ನೂ ಹಲವು ಸುತ್ತಿನ ಮಾತುಕತೆ ಅಗತ್ಯ ಇದೆ. ಮಾತುಕತೆ ವೇಳೆ ಭಾರತ ಬಿಗಿ ನಿಲುವು ತಳೆದಿದ್ದು, ಅತಿಕ್ರಮಣ ಕೊನೆಗೊಳಿಸಿ  ತನ್ನ ಭೂ ಪ್ರದೇಶದಿಂದ ಹಿಂದೆ ಸರಿಯಬೇಕು ಎಂದು ಚೀನಾವನ್ನು ಆಗ್ರಹಿಸಿದೆ.  ರಾಜತಾಂತ್ರಿಕ ಮಾರ್ಗಗಳ ಮೂಲಕ ಸಮಸ್ಯೆ ಬಗೆಹರಿಸಲು ಉಭಯ ರಾಷ್ಟ್ರಗಳು ಮೊದಲ ಆದ್ಯತೆ ನೀಡಿವೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!