Thursday, December 9, 2021

ಭಯೋತ್ಪಾದನಾ ಶಿಬಿರಗಳ ಮೇಲೆ ಗುಂಡಿನ ದಾಳಿ

Follow Us

ಶ್ರೀನಗರ: ಜಮ್ಮು ಕಾಶ್ಮೀರದ  ಕುಪ್ವಾರ ಜಿಲ್ಲೆಯ ಕೇರಾನ್ ಪ್ರದೇಶದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಭಾರತ ದಿಟ್ಟ ಪ್ರತ್ಯುತ್ತರ ನೀಡಿದೆ. ಭಾರತದೊಳಗೆ ಭಯೋತ್ಪಾದಕರನ್ನು ಒಳನುಗ್ಗಿಸುವ ಕಾರ್ಯತಂತ್ರದ ಅಂಗವಾಗಿ ಪಾಕಿಸ್ತಾನ ಗುಂಡಿನ ದಾಳಿ ನಡೆಸಿತ್ತು. ಪಾಕಿಸ್ತಾನದ ಕುತಂತ್ರವನ್ನು ಭಾರತ ವಿಫಲಗೊಳಿಸಿದೆ. ಗಡಿ ನಿಯಂತ್ರಣ ರೇಖೆಗೆ ಹೊಂದಿಕೊಂಡಂತೆ ಪಾಕ್ ನೆಲದಲ್ಲಿ ಇರುವ ಭಯೋತ್ಪಾದನಾ ಶಿಬಿರಗಳ ಮೇಲೆ ನಿಖರ ದಾಳಿ ನಡೆಸಲಾಗಿದೆ. ಭಾರತದ ಯೋಧರು ನಡೆಸಿದ ಪ್ರತಿದಾಳಿಯ ದೃಶ್ಯಗಳನ್ನು ಸೇನೆ ಬಿಡುಗಡೆ ಮಾಡಿದೆ.  ಕಳೆದ ವಾರ ಭಾರತದ ಧೀರ ಯೋಧರು  ಆರಕ್ಕೂ ಹೆಚ್ಚು ಭಯೋತ್ಪಾದಕರನ್ನು ಯಮಪುರಿಗೆ ಅಟ್ಟಿದ್ದರು.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!