Monday, October 3, 2022

ಆರ್ಥಿಕ ಪ್ರಗತಿಯಲ್ಲಿ ಭಾರತ ನಂಬರ್ 1: ವಿಶ್ವಸಂಸ್ಥೆ

Follow Us

newsics.com
ವಿಶ್ವಸಂಸ್ಥೆ: ಭಾರತ ಜಗತ್ತಿನಲ್ಲೇ ಅತಿ ವೇಗದ ಆರ್ಥಿಕ ಪ್ರಗತಿ ಕಾಣುತ್ತಿದೆ ಎಂದು ವಿಶ್ವಸಂಸ್ಥೆ ಹೇಳಿದೆ.
ಉಕ್ರೇನ್‌-ರಷ್ಯಾ ನಡುವಿನ ಯುದ್ಧ ಜಾಗತಿಕ ಆರ್ಥಿಕತೆ ಮೇಲೆ ಪರಿಣಾಮ ಬೀರಿದರೂ 2022ನೇ ಸಾಲಿನಲ್ಲಿ ಭಾರತ ಶೇ.6.4ರ ದರದಲ್ಲಿ ಪ್ರಗತಿ ಕಾಣಲಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.
ವಿಶ್ವಸಂಸ್ಥೆಯ ಆರ್ಥಿಕ ಹಾಗೂ ಸಾಮಾಜಿಕ ವ್ಯವಹಾರಗಳ ಇಲಾಖೆ ‘ವಿಶ್ವ ಆರ್ಥಿಕ ಪರಿಸ್ಥಿತಿ ಹಾಗೂ ಮುನ್ನೋಟ’ ವರದಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ.
ಜಗತ್ತು 2022ರಲ್ಲಿ ಕೇವಲ ಶೇ.3.1ರ ದರದಲ್ಲಿ ಆರ್ಥಿಕ ಪ್ರಗತಿ ಕಾಣಲಿದೆ ಎಂದೂ ವಿಶ್ವಸಂಸ್ಥೆ ತಿಳಿಸಿದೆ.
ಭಾರತವು ಈ ಮುನ್ನ ಶೇ.8.8ರ ಬೆಳವಣಿಗೆ ದರ ಕಾಣಲಿದೆ ಎಂದು ಅಂದಾಜು ಮಾಡಲಾಗಿತ್ತು. ಆದರೆ ಪ್ರಗತಿ ದರದ ಅಂದಾಜು ಶೇ.6.4ಕ್ಕೆ ಇಳಿದರೂ ಇಷ್ಟುವೇಗದ ಜಿಡಿಪಿ ಬೆಳವಣಿಗೆ ದರ ದಾಖಲಿಸುವ ಏಕೈಕ ದೇಶವಾಗಲಿದೆ ಎಂದು ವರದಿ ಅಭಿಪ್ರಾಯಪಟ್ಟಿದೆ.
ಈ ನಡುವೆ 2023ನೇ ಸಾಲಿನಲ್ಲಿ ಭಾರತ ಶೇ.6ರ ದರದಲ್ಲಿ ಪ್ರಗತಿ ಸಾಧಿಸಲಿದೆ ಎಂದು ವರದಿ ಹೇಳಿದೆ.

ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಬಳ್ಳಾರಿ, ಚಿತ್ರದುರ್ಗ, ತುಮಕೂರಿನಿಂದ ಅದಿರು ಸಾಗಣೆಗೆ ಸುಪ್ರೀಂ ಸಮ್ಮತಿ

ಐವರು‌ ಮಹಿಳೆಯರು ಸೇರಿ 9 ಮಂದಿ ಜಲಸಮಾಧಿ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!