Monday, April 12, 2021

ಪಾಕ್ ಕುತಂತ್ರಕ್ಕೆ ಭಾರತದ ಪ್ರತ್ಯುತ್ತರ: ಮೂವರು ಪಾಕ್ ಯೋಧರ ಬಲಿ

ಶ್ರೀನಗರ: ಗಡಿ ನಿಯಂತ್ರಣ ರೇಖೆಯಲ್ಲಿ ಭಾರತದ ಯೋಧರ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ಭಾರತ ದಿಟ್ಟ ಪ್ರತ್ಯುತ್ತರ ನೀಡಿದೆ  ಪೂಂಛ್ ವಲಯದಲ್ಲಿ ಪಾಕಿಸ್ತಾನದ ನೆಲೆಗಳನ್ನು ಗುರಿಯಾಗಿರಿಸಿ ಭಾರತ ಪ್ರತಿದಾಳಿ ನಡೆಸಿದೆ. ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಮೂವರು ಸೈನಿಕರು ಹತರಾಗಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ನಾಲ್ಕು ಮುಂಚೂಣಿ ಸೇನಾ ನೆಲೆಗಳನ್ನು ಕೂಡ ನಾಶಪಡಿಸಲಾಗಿದೆ. ಜಮ್ಮು ಕಾಶ್ಮೀರಕ್ಕೆ ಉಗ್ರರನ್ನು ರವಾನಿಸಲು ಪಾಕಿಸ್ತಾನ  ಗುಂಡಿನ ದಾಳಿಯ ತಂತ್ರಕ್ಕೆ ಶರಣಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಕಳೆದ ವಾರ ಪಾಕ್ ಬೆಂಬಲಿತ ಭಯೋತ್ಪಾದಕರ ವಿರುದ್ದ ನಡೆದ  ಕಾರ್ಯಾಚರಣೆಯಲ್ಲಿ ಭಾರತ ಕರ್ನಲ್ ದರ್ಜೆಯ ಅಧಿಕಾರಿ ಸೇರಿದಂತೆ ಐವರು ಯೋಧರನ್ನು ಕಳೆದುಕೊಂಡಿತ್ತು. ಆ ಬಳಿಕ ಸಿಆರ್ ಪಿಎಫ್ ತಂಡವನ್ನು ಗುರಿಯಾಗಿರಿಸಿ ಭಯೋತ್ಪಾದಕರು ದಾಳಿ ನಡೆಸಿದ್ದರು. ಇದೀಗ ಪಾಕಿಸ್ತಾನದ ಕುತಂತ್ರಕ್ಕೆ ಭಾರತ ದಿಟ್ಟ ಪ್ರತ್ಯುತ್ತರ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!