Saturday, April 17, 2021

ಭಾರತ-ಶ್ರೀಲಂಕಾ ಕ್ರಿಕೆಟ್ ಸರಣಿ ರದ್ದು

ಮುಂಬೈ: ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಭಾರತ-ಶ್ರೀಲಂಕಾ ತಂಡಗಳ ನಡುವಿನ ಕ್ರಿಕೆಟ್ ಸರಣಿ ರದ್ದಾಗಿದೆ.
ಈ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಣೆ ಹೊರಡಿಸಿದ್ದು, ಕೊರೋನಾ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಭಾರತ-ಶ್ರೀಲಂಕಾ ತಂಡಗಳ ನಡುವಿನ ಕ್ರಿಕೆಟ್ ಸರಣಿಯನ್ನು ರದ್ದು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಶ್ರೀಲಂಕಾ ಕ್ರಿಕೆಟ್ ಮಂಡಳಿ ಕೂಡ ಈ ವಿಚಾರವನ್ನು ಪುನರುಚ್ಚರಿಸಿದೆ. ಶ್ರೀಲಂಕಾ ಪ್ರವಾಸ ಕೈಗೊಳ್ಳಬೇಕಿದ್ದ ಭಾರತ ತಂಡ ಅಲ್ಲಿ ಮೂರು ಏಕದಿನ, ಮೂರು ಟಿ20 ಪಂದ್ಯಗಳನ್ನು ಆಡಬೇಕಿತ್ತು. ಲಂಕಾದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,873ಕ್ಕೆ ಏರಿಕೆಯಾಗಿದೆ. 11 ಮಂದಿ ಬಲಿಯಾಗಿದ್ದಾರೆ. ಲಂಕಾದಲ್ಲಿ ಲಾಕ್ ಡೌನ್ ಸಡಿಲಿಕೆಯಾಗಿದೆಯಾದರೂ, ದೇಶಾದ್ಯಂತ ರಾತ್ರಿ ವೇಳೆ ಕರ್ಫ್ಯೂ ಜಾರಿಯಲ್ಲಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!