ನವದೆಹಲಿ: ಕೋವಿದ್ -19 ಸೋಂಕಿನಿಂದ ಕಂಗೆಟ್ಟಿರುವ ಚೀನಾಗೆ ಭಾರತ ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಪೂರೈಸಲು ಮುಂದಾಗಿದೆ.
ಚೀನಾದ ಬಿಕ್ಕಟ್ಟು ಪರಿಸ್ಥಿತಿಯನ್ನು ನಿವಾರಿಸಲು ಭಾರತ ಎಲ್ಲಾ ಸಾಧ್ಯ ನೆರವು ನೀಡಲು ಮುಂದಾಗಿದ್ದು, ಶೀಘ್ರದಲ್ಲೇ ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಪೂರೈಸಲಾಗುವುದು ಎಂದು ಚೀನಾದ ಭಾರತೀಯ ರಾಯಭಾರಿ ವಿಕ್ರಮ್ ಮಿಸ್ರಿ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.