newsics.com
ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ನಿಖತ್ ಜರೀನ್ ಅವರು ಚಿನ್ನ ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.
ಟರ್ಕಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಎದುರಾಳಿ ವಿರುದ್ಧ ಭರ್ಜರಿ ಜಯ ಸಾಧಿಸಿದ್ದು, ಈ ಮೂಲಕ ಭಾರತದ ಐದನೇ ಮಹಿಳಾ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಿಖತ್ ಅವರ ಈ ಸಾಧನೆಯನ್ನು ಪ್ರಧಾನಿ ಮೋದಿಯವರು ಟ್ವೀಟ್ ಮಾಡುವ ಮೂಲಕ ಕೊಂಡಾಡಿದ್ದಾರೆ.
ನಿಖತ್ ಜರೀನ್ ಅವರು ಫೈನಲ್ ನಲ್ಲಿ ಥಾಯ್ಲೆಂಡ್ ವಿರುದ್ಧ ಅಮೋಘ ಹೋರಾಟ ನಡೆಸಿ ದೇಶಕ್ಕೆ ಚಿನ್ನದ ಪದಕ ತಂದು ಕೊಟ್ಟಿದ್ದಾರೆ.