Thursday, May 26, 2022

ಭಾರತ ಮಹಿಳಾ ತಂಡದ ಆರಂಭಿಕ ಬ್ಯಾಟರ್​ ಸ್ಮೃತಿ ಮಂಧಾನ ಐಸಿಸಿ ವರ್ಷದ “ಅತ್ಯುತ್ತಮ ಮಹಿಳಾ ಕ್ರಿಕೆಟರ್​” ಪ್ರಶಸ್ತಿಗೆ ಆಯ್ಕೆ

Follow Us

newsic.com

ದುಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಐಸಿಸಿ ವರ್ಷದ ಅತ್ಯುತ್ತಮ ಮಹಿಳಾ ಕ್ರಿಕೆಟರ್ ಆಗಿ ಆಯ್ಕೆಯಾಗಿದ್ದಾರೆ.

ಐಸಿಸಿ ಸೋಮವಾರ ಹೇಳಿಕೆ ನೀಡುವ ಮೂಲಕ ಈ ವಿಷಯವನ್ನು ಪ್ರಕಟಿಸಿದೆ.

ಇವರು ಕಳೆದ ವರ್ಷ ಒಟ್ಟು 22 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಇಷ್ಟು ಪಂದ್ಯಗಳಲ್ಲಿ ಸ್ಮೃತಿ 38.86 ಸರಾಸರಿಯಲ್ಲಿ 855 ರನ್ ಗಳಿಸಿದ್ದರು. ಈ ಅವಧಿಯಲ್ಲಿ ಅವರು ಒಂದು ಶತಕ ಮತ್ತು ಐದು ಅರ್ಧ ಶತಕಗಳನ್ನು ಬಾರಿಸಿದ್ದರು.

ಕಳೆದ ವರ್ಷದ ಆಟದ ಎಲ್ಲಾ ಮೂರು ಸ್ವರೂಪಗಳಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅದಕ್ಕಾಗಿಯೇ ಐಸಿಸಿ ಅವರನ್ನು ರಾಚೆಲ್ ಹೇಹೋ ಫ್ಲಿಂಟ್ ಟ್ರೋಫಿಗೆ ಆಯ್ಕೆ ಮಾಡಿದೆ. ಮಂಧಾನ ಭಾರತದ ಅತ್ಯುತ್ತಮ ಬ್ಯಾಟರ್​ಗಳಲ್ಲಿ ಒಬ್ಬರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!