newsics.com
ನವದೆಹಲಿ: ವಾಹನಗಳ ಕರ್ಕಶ ಶಬ್ದಗಳಿಗೆ ಭಾರತೀಯ ಶಾಸ್ತ್ರೀಯ ಸಂಗೀತ ಉಪಕರಣಗಳ ನಾದದ ಸ್ಪರ್ಶ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಅಂತಿಮ ತೀರ್ಮಾನಕ್ಕೆ ಬರಲಾಗಿದ್ದು, ಕಾನೂನು ಶೀಘ್ರ ಜಾರಿಯಾಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ವಾಹನಗಳ ಕರ್ಕಶ ಶಬ್ದದಿಂದ ಕಿರಿ ಕಿರಿ ಉಂಟಾಗುತ್ತಿದೆ ಎಂದು ಹಲವು ದೂರುಗಳು ಕೇಳಿ ಬಂದಿದ್ದವು. ಆ್ಯಂಬುಲೆನ್ಸ್ ಮತ್ತು ಪೊಲೀಸ್ ವಾಹನಗಳ ಶಬ್ದ ಬದಲಾವಣೆಗೆ ಕೂಡ ತೀರ್ಮಾನಿಸಲಾಗಿದೆ ಎಂದು ನಿತೀನ್ ಗಡ್ಕರಿ ಹೇಳಿದ್ದಾರೆ.
ವಾಹನಗಳ ಮೇಲಿನ ಕೆಂಪು ದೀಪ ಶೀಘ್ರವೇ ತೆರವುಗೊಳಿಸಲಾಗುವುದು ಎಂದು ಕೂಡ ಅವರು ಮಾಹಿತಿ ನೀಡಿದ್ದಾರೆ.