Monday, November 29, 2021

39 ಲಕ್ಷ ರೈಲ್ವೆ ಟಿಕೆಟ್ ರದ್ದುಗೊಳಿಸಿದ ಭಾರತೀಯ ರೈಲ್ವೆ

Follow Us

ನವದೆಹಲಿ: ಲಾಕ್ ಡೌನ್ ಏಪ್ರಿಲ್ 14ಕ್ಕೆ ಮುಕ್ತಾಯವಾಗುತ್ತದೆಂಬ ನಿರೀಕ್ಷೆಯಲ್ಲಿ ಜನ ಬುಕ್ ಮಾಡಿದ್ದ 39 ಲಕ್ಷ ರೈಲ್ವೆ ಟಿಕೆಟ್ ಗಳನ್ನು ಭಾರತೀಯ ರೈಲ್ವೆ ರದ್ದುಪಡಿಸಿದೆ.
ಮೇ 3 ರ ವರೆಗೂ ಲಾಕ್ ಡೌನ್ ಮುಂದುವರೆದ ಹಿನ್ನೆಲೆಯಲ್ಲಿ ಪ್ರಯಾಣಿಕರ ರೈಲು ಸಂಚಾರ ಬಂದ್ ಮಾಡಲಾಗಿದ್ದು, ಮೇ 3 ರವರೆಗೆ ಬುಕ್ ಆಗಿದ್ದ ಎಲ್ಲಾ ಟಿಕೆಟ್ ಗಳನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.
ಲಾಕ್ ಡೌನ್ ಮುಂದುವರೆದ ಹಿನ್ನೆಲೆಯಲ್ಲಿ ಮೇ 3 ರವರೆಗೂ ಘೋಷಣೆಯಾಗಿದ್ದ ಎಲ್ಲ 39 ಲಕ್ಷ ಟಿಕೆಟ್ ಗಳನ್ನು ಭಾರತೀಯ ರೈಲ್ವೆ ಕ್ಯಾನ್ಸಲ್ ಮಾಡಿದೆ. ಮುಂದಿನ ಆದೇಶದವರೆಗೆ ಬುಕಿಂಗ್ ರದ್ದು ಮಾಡಲಾಗಿದೆ. ಟಿಕೆಟ್ ಬುಕ್ ಮಾಡಿದವರಿಗೆ ಹಣ ವಾಪಸ್ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ಲಾಕ್ಡೌನ್ ಏಪ್ರಿಲ್ 14ಕ್ಕೆ ಮುಕ್ತಾಯವಾಗಲಿದೆ ಎಂಬ ನಿರೀಕ್ಷೆಯಲ್ಲಿ ಟಿಕೆಟ್ ಬುಕಿಂಗ್ ಆರಂಭಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!