Wednesday, October 5, 2022

ಸುಡಾನ್ ಗೆ ತೆರಳಿದ ಭಾರತದ ಯೋಧರು: ಶಾಂತಿಪಾಲನಾ ಪಡೆಯಲ್ಲಿ ಸೇವೆ

Follow Us

Newsics.com

ನವದೆಹಲಿ:  ಗಲಭೆಗ್ರಸ್ತ ದಕ್ಷಿಣ ಸುಡಾನ್ ನಲ್ಲಿ ಕಾನೂನು ಮತ್ತು ಶಿಸ್ತು ಪರಿಸ್ಥಿತಿ ಖಾತರಿಪಡಿಸಲು ಭಾರತ ತನ್ನ ಯೋಧರನ್ನು ಕಳುಹಿಸಿಕೊಟ್ಟಿದೆ. ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯಲ್ಲಿ ಈ ಯೋಧರು ಸೇವೆ ಸಲ್ಲಿಸಲಿದ್ದಾರೆ.

ವಿಶ್ವದ ಅತ್ಯುತ್ತಮ ಸೇನಾಪಡೆಗಳಲ್ಲಿ ಭಾರತ ಅಗ್ರ ಸ್ಥಾನದಲ್ಲಿದೆ. ಶಿಸ್ತು ಮತ್ತು ಅರ್ಪಣಾ ಮನೋಭಾವಕ್ಕೆ ಸೇನೆ ಹೆಸರು ಪಡೆದಿದೆ. ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯ ಖಾಯಂ ಸದಸ್ಯ ರಾಷ್ಟ್ರವಾಗಿರುವ ಭಾರತ, ಆಫ್ರಿಕಾ ಖಂಡದಲ್ಲಿ ಕಾನೂನು ಮತ್ತು ಶಿಸ್ತು ಪರಿಸ್ಥಿತಿ ಖಾತರಿಪಡಿಸಲು  ಮಹತ್ವದ ಕೊಡುಗೆ ನೀಡಿದೆ.

ಇದೀಗ ಹೊಸ ತಂಡ ವಿಶ್ವಸಂಸ್ಥೆಯ ಶಾಂತಿಪಾಲನ ತಂಡ ಸೇರಲಿದೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಧರನ್ನು ಬೀಳ್ಕೊಡಲಾಯಿತು .  ಕರ್ತವ್ಯ ನಿರ್ವಹಣೆ ವೇಳೆ ಪಾಲಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಲಾಯಿತು.

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!