Tuesday, April 13, 2021

ಲಡಾಕ್ ಗಡಿಯಲ್ಲಿ ಮೂರು ಪ್ರದೇಶಗಳಲ್ಲಿ ಚೀನಾ ಅತಿಕ್ರಮಣ?

ನವದೆಹಲಿ: ಚೀನಾದ ಸೇನೆ ಭಾರತದ ಲಡಾಕ್ ನಲ್ಲಿ ಮೂರು ಪ್ರದೇಶಗಳಲ್ಲಿ ಅತಿಕ್ರಮಣ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಖ್ಯಾತ ರಕ್ಷಣಾ ತಜ್ಞ  ಬ್ರಹ್ಮ ಚೆಲೇರಿ ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಚೀನಾ ಅತ್ಯುಗ್ರವಾಗಿ ವರ್ತಿಸುತ್ತಿದ್ದರೂ ಭಾರತ ಯಾಕೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.  ಕೊರೋನಾ ಸೃಷ್ಟಿಯಾದ ಬಳಿಕ ಅಂತಾರಾಷ್ಟ್ರೀಯ ಸಮುದಾಯದಲ್ಲಿ ಚೀನಾ ಏಕಾಂಗಿಯಾಗಿದ್ದು, ಹತಾಶೆ ಮನೋಭಾವದಿಂದ ಈ ರೀತಿ ವರ್ತಿಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಹಾಂಗ್ ಕಾಂಗ್ ನಲ್ಲಿ ಕೂಡ ಚೀನಾ ತನ್ನ ಹಠಮಾರಿ  ವರ್ತನೆ ತೋರಿಸುತ್ತಿದೆ. ಈ ಮಧ್ಯೆ ಭಾರತದ ಯಾವುದೇ ಯೋಧನನ್ನು ಚೀನಾ ತನ್ನ ವಶಕ್ಕೆ ತೆಗೆದುಕೊಂಡಿರಲಿಲ್ಲ ಎಂದು ಸೇನೆ ಸ್ಪಷ್ಟಪಡಿಸಿದೆ. ಇದು ಆಧಾರ ರಹಿತ ಕಪೋಲ ಕಲ್ಪಿತ ವರದಿ ಎಂದು ಸೇನೆ ಪ್ರತಿಕ್ರಿಯಿಸಿದೆ. ಈ ಮಧ್ಯೆ ಚೀನಾದ ದುಸ್ಸಾಹಸ ತಡೆಯಲು ಭಾರತದ ಯೋಧರು ಸಜ್ಜಾಗಿದ್ದು,  ಹೆಚ್ಚುವರಿ ಪಡೆಗಳನ್ನು ರವಾನಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!